ಸೋಮವಾರ, ಮಾರ್ಚ್ 30, 2020
19 °C
ಜಿಲ್ಲಾ ಯುವಜನ ಕೇಂದ್ರದ ಸಮನ್ವಯಾಧಿಕಾರಿ ಶ್ರೀವಾಣಿ ಕೋನರೆಡ್ಡಿ ಅಭಿಮತ

ಸಾಮಾಜಿಕ ಬದಲಾವಣೆ ಯುವಜನರಿಂದ ಸಾಧ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೂಲಿಬೆಲೆ: ಗ್ರಾಮೀಣ ಪ್ರದೇಶದ ಯುವಕರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದರೆ ಸಾಮಾಜಿಕ ಬದಲಾವಣೆ ಸಾಧ್ಯ. ಯುವಕರಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ಅಗತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾ ಯುವಜನ ಕೇಂದ್ರದ ಸಮನ್ವಯಾಧಿಕಾರಿ ಶ್ರೀವಾಣಿ ಕೋನರೆಡ್ಡಿ ತಿಳಿಸಿದರು.

ಜಿಲ್ಲೆಯ ನೆಹರೂ ಯುವ ಕೇಂದ್ರ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಹಾಗೂ ಜೈ ಜವಾನ್ ಜೈ ಕಿಸಾನ್ ಯುವಕರ ಸಂಘದ ವತಿಯಿಂದ ಸೂಲಿಬೆಲೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನೆಹರೂ ಯುವಜನ ಕೇಂದ್ರ ಕಳೆದ 48 ವರ್ಷಗಳಿಂದ ನಿರಂತರವಾಗಿ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಯುವ ಸಮುದಾಯವನ್ನು ಸಂಘಟಿಸಿವುದು ಮತ್ತು ಸಬಲೀಕರಣಗೊಳಿಸುವುದು ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ಬದ್ಧತೆಯನ್ನು ಸಾಕಾರಗೊಳಿಸುತ್ತಿದೆ ಎಂದು ವಿವರಿಸಿದರು.

ಡಾ.ನಾಗರಾಜ್ ಮಾತನಾಡಿ, ಪ್ರತಿಯೊಬ್ಬರಲ್ಲೂ ನಾಯಕತ್ವದ ಗುಣ ಇರುತ್ತದೆ. ಭಾರತ ದೇಶವು ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಯುವಕರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಬೇಕು. ರಾಜಕೀಯ ಕ್ಷೇತ್ರಕ್ಕೆ ಯುವಕರು ಬರುವುದರಿಂದ ವ್ಯವಸ್ಥೆಯು ಪಾರದರ್ಶಕವಾಗುತ್ತದೆ. ಅಲ್ಲದೆ ಚಲನಶೀಲವಾಗುತ್ತದೆ ಎಂದು ವಿಶ್ಲೇಷಿಸಿದರು.

ಸ್ವಾತಂತ್ರ್ಯ ಹೋರಾಟಗಾರ ಸೂ.ರಂ.ರಾಮಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಪ್ರೊ. ನಾರಾಯಣ ಸ್ವಾಮಿ, ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಡಾ.ಎನ್.ಎ.ಆದಿನಾರಾಯಣಪ್ಪ, ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ಆರ್.ರಂಗನಾಥ್, ಮುಖ್ಯ ಶಿಕ್ಷಕ ಕೆ.ಸುರೇಶ್ ಹಾಗೂ ಉಪನ್ಯಾಸಕ ವರ್ಗ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು