ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಹಳ್ಳಿ ಶಾಲೆಗಳಿಗೆ ಹೊಸ ಸ್ಪರ್ಶ

Last Updated 12 ಸೆಪ್ಟೆಂಬರ್ 2022, 6:11 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಎಜಾಕ್ಸ್‌ ಎಂಜಿನಿಯರಿಂಗ್‌ ಪ್ರೈವೆಟ್‌ ಲಿಮಿಟೆಡ್‌ ಸಿಎಸ್‌ಆರ್‌ ನಿಧಿಯನ್ನು ಚಾರಿಟಬಲ್‌ ಟ್ರಸ್ಟ್‌ ಮೂಲಕ ₹14 ಕೋಟಿ ವೆಚ್ಚದಲ್ಲಿ ಸರ್ಕಾರಿ ಶಾಲಾ ಕಟ್ಟಡ ಸೇರಿದಂತೆ ಕಲಿಕೆಗೆ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿದೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿರುವ ಟ್ರಸ್ಟ್‌ ನಾಲ್ಕು ವರ್ಷಗಳಿಂದ ಈಚೆಗೆ ಲ್ಯಾಬ್‌, ಕಂಪ್ಯೂಟರ್‌ ಕೊಠಡಿ, ಕಂಪ್ಯೂಟರ್‌,ಶೌಚಾಲಯ,ಮೈದಾನ, ಅಡುಗೆ ಮನೆ ನಿರ್ಮಿಸಿದೆ. ₹1.5 ಕೋಟಿ ವೆಚ್ಚದಲ್ಲಿ ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಚಿಕಿತ್ಸಾ ಕಟ್ಟಡ ನಿರ್ಮಿಸಲಾಗುತ್ತಿದೆ ಎನ್ನುತ್ತಾರೆ ಸಿಎಸ್‌ಆರ್ ಅಧಿಕಾರಿ ಸಿ.ಮಂಜುನಾಥ್‌.

ತಿಮ್ಮಸಂದ್ರ ಗ್ರಾಮದಲ್ಲಿ ₹23 ಲಕ್ಷ ವೆಚ್ಚದಲ್ಲಿ ಪಿರಮಿಡ್‌ ಮಾದರಿಯ ನೂತನ ವಿನ್ಯಾಸದಲ್ಲಿ ನಿರ್ಮಿಸಿರುವ ಆಕರ್ಷಕ ವಿನ್ಯಾಸದ ಅಂಗನವಾಡಿ ಕಟ್ಟಡ ಗಮನ ಸೆಳೆಯುತ್ತದೆ. ಒಂದೇ ಸೂರಿನಡಿ ಪುಟ್ಟ ಮಕ್ಕಳ ಕಲಿಕೆ, ಆಟ, ಶೌಚಾಲಯ, ಅಡುಗೆ ಮನೆ, ಊಟದ ಮನೆ ಸೇರಿದಂತೆ ಎಲ್ಲಾ ಸೌಲಭ್ಯ ಕಲ್ಪಿಸಲಾಗಿದೆ.

ಕೈಗಾರಿಕಾ ಪ್ರದೇಶದ ಬಾಶೆಟ್ಟಿಹಳ್ಳಿಯಲ್ಲಿ ಹಿರಿಯ ಪ್ರಾಥಮಿಕ ಶಾಲೆ ದತ್ತು ಪಡೆದು ₹ 8 ಕೋಟಿ ವೆಚ್ಚದಲ್ಲಿ ಎಜಾಕ್ಸ್‌ ಸರ್ಕಾರಿ ಪಬ್ಲಿಕ್ ಸ್ಕೂಲ್ ನಿರ್ಮಿಸಲಾಗಿದೆ. ಈ ಶಾಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೇ ಅತ್ಯಂತ ಸುಸಜ್ಜಿತ ಶಾಲೆಯಾಗಿದೆ. ಖಾಸಗಿ ಶಾಲೆಗಳಿಗೆ ಹೋಗುತ್ತಿದ್ದ ಮಕ್ಕಳು ಸಹ ಈ ಶಾಲೆಗೆ ದಾಖಲಾಗುವ ಮೂಲಕ ತಾಲ್ಲೂಕಿನಲ್ಲೇ ಹೆಚ್ಚಿನ ಮಕ್ಕಳು ಕಲಿಯುತ್ತಿರುವ ಶಾಲೆ ಎನ್ನುವ ಕೀರ್ತಿಗೂ ಪಾತ್ರವಾಗಿದೆ.ರಾಜ್ಯ ಸರ್ಕಾರ ‘ರಾಜ್ಯ ಮಟ್ಟದ ಸ್ವಚ್ಛ ವಿದ್ಯಾಲಯ ಪುರಸ್ಕಾರ’ ನೀಡಿ ಗೌರವಿಸಿದೆ.ರಾಷ್ಟ್ರ ಪುರಸ್ಕಾರಕ್ಕೂ ಶಿಪಾರಸ್ಸುಗೊಂಡಿದೆ.

ಆಯ್ಕೆಗಾಗಿ ಪೋಷಕರ ಸಮ್ಮುಖದಲ್ಲಿ ಲಾಟರಿ ಎತ್ತುವ ಮೂಲಕ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳಲಾಗಿದೆ ಎನ್ನುತ್ತಾರೆ ಶಾಲೆಯ ಮುಖ್ಯ ಶಿಕ್ಷಕಿ ಆರ್‌.ರಾಜೇಶ್ವರಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT