ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾ.ಸದಾಶಿವ ಆಯೋಗದ ವರದಿ ಅನುಷ್ಠಾನಕ್ಕೆ ಮನವಿ

Last Updated 16 ಸೆಪ್ಟೆಂಬರ್ 2020, 4:29 IST
ಅಕ್ಷರ ಗಾತ್ರ

ವಿಜಯಪುರ: ‘ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸುಮಾಡುವಂತೆ ಸರ್ಕಾರಕ್ಕೆ ಒತ್ತಾಯ ಮಾಡಲು ಬಲಗೈ ಸಮುದಾಯದ ನಾಯಕರ ಸಂಪೂರ್ಣ ಸಹಕಾರ ಅಗತ್ಯವಿದೆ’ ಎಂದು ಕರ್ನಾಟಕ ದಲಿತ ಜನ ಸೇನೆ ರಾಜ್ಯ ಘಟಕದ ಅಧ್ಯಕ್ಷ ಟಿ.ಭರತ್ ಅವರು ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

‘ಜನಸಂಖ್ಯಾಧಾರಿತವಾಗಿ ಒಳಮೀಸಲಾತಿ ನೀಡುವುದು ಆಯಾ ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿರುವ ವಿಚಾರವೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದರೂ ಸರ್ಕಾರ ಈ ಬಗ್ಗೆ ಗಮನಹರಿಸುತ್ತಿಲ್ಲ. ಹಿಂದಿನಿಂದಲೂ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೂರೂ ಸರ್ಕಾರಗಳೂ ಈ ಕುರಿತು ಸುಳ್ಳು ಭರವಸೆ ನೀಡುತ್ತಲೇ ಬರುತ್ತಿವೆ. ವರದಿಯ ಅನುಷ್ಠಾನಕ್ಕಾಗಿ ಹೋರಾಟ ಮಾಡಿಕೊಂಡು ಬರುತ್ತಿರುವ ಸಮುದಾಯಗಳಿಗೆ ನ್ಯಾಯ ಒದಗಿಸುವಂತಹ ಕೆಲಸ ಮಾಡಬೇಕಾಗಿದೆ’ ಎಂದು ಹೇಳಿದ್ದಾರೆ.

‘ಪರಿಶಿಷ್ಟ ಜಾತಿಯಲ್ಲಿ ಪ್ರಬಲವಾಗಿರುವ ಎಡಗೈ ಮತ್ತು ಬಲಗೈ ಸಮುದಾಯಗಳ ನಡುವೆ ವಿಷ ಬೀಜ ಬಿತ್ತಿ ರಾಜಕೀಯ ಬೇಳೆ ಬೇಯಿಸಿಕೊಂಡು ನಮ್ಮ ಎರಡೂ ಸಮುದಾಯಗಳು ಆರ್ಥಿಕವಾಗಿ, ಸಾಮಾಜಿಕ, ಶೈಕ್ಷಣಿಕವಾಗಿ ಮತ್ತು ರಾಜಕೀಯವಾಗಿ ಹಿಂದುಳಿಯಲು ಕಾರಣವಾಗುತ್ತಿರುವ ಪಟ್ಟಭದ್ರ ಹಿತಾಸಕ್ತಿಗಳನ್ನು ಹಿಮ್ಮೆಟ್ಟಿಸಬೇಕಾದರೆ, ಅವರು ಬಿತ್ತುತ್ತಿರುವ ವಿಷಬೀಜಗಳು ಮೊಳಕೆಯೊಡೆಯದಂತೆ ನೋಡಿಕೊಂಡು ನಾವೆಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT