ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹೆಸರಿಗಷ್ಟೇ ಸಂಸ್ಥೆಗಳು ಸ್ಥಾಪನೆಯಾಗದಿರಲಿ’

ರಚನಾತ್ಮಕ ಕಾರ್ಯಕ್ರಮ ರೂಪಿಸಲು ಪಿಡಿಒ ಡಾ.ವೈಷ್ಣವಿ ಸಲಹೆ
Last Updated 1 ಮಾರ್ಚ್ 2020, 13:08 IST
ಅಕ್ಷರ ಗಾತ್ರ

ಆನೇಕಲ್: ಸಂಘ ಸಂಸ್ಥೆಗಳು ರಚನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡರೆ ಮಾತ್ರ ಸಂಸ್ಥೆಯ ಸ್ಥಾಪನೆಯ ಉದ್ದೇಶ ಈಡೇರುತ್ತದೆ. ಹೆಸರಿಗಷ್ಟೇ ಸಂಘಗಳ ಸ್ಥಾಪನೆ ಮಾಡುವುದರಿಂದ ಯಾವುದೇ ಉಪಯೋಗವಿಲ್ಲ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಾ.ವೈಷ್ಣವಿ ತಿಳಿಸಿದರು.

ಪಟ್ಟಣದಲ್ಲಿ ಸವಿನೆನಪು ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ ಗುರುವಂದನಾ ಕಾರ್ಯಕ್ರಮ ಮತ್ತು ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಶಿಕ್ಷಣ, ಆರೋಗ್ಯ ಇವೇ ಮೊದಲಾದ ಕ್ಷೇತ್ರಗಳಲ್ಲಿಜಾಗೃತಿ ಮೂಡಿಸುವ ಸೇವಾ ಕಾರ್ಯಕ್ರಮಗಳನ್ನು ಸಂಘ– ಸಂಸ್ಥೆಗಳು ರೂಪಿಸಿದರೆ ಅದು ಸಮಾಜಕ್ಕೆ ನೀಡುವ ಉತ್ತಮ ಕೊಡುಗೆಯಾಗುತ್ತದೆ. ಯಾವುದೇ ಕೆಲಸದಲ್ಲಿ ಬದ್ಧತೆ, ಶ್ರದ್ಧೆಯಿದ್ದರೆ ಉನ್ನತವಾದುದನ್ನು ಸಾಧಿಸಬಹುದು ಎಂದು ಅಭಿಪ್ರಾಯಪಟ್ಟರು.

ವಿಧಾತ್‌ ವಿದ್ಯಾ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿ ತಾ.ನಂ.ಕುಮಾರಸ್ವಾಮಿ ಮಾತನಾಡಿ, 1998ರಲ್ಲಿ ಎಸ್ಎಸ್‌ಎಲ್‌ಸಿ ವ್ಯಾಸಂಗ ಮಾಡಿದ ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ ಟ್ರಸ್ಟ್‌ ಸ್ಥಾಪನೆ ಮಾಡಿರುವುದು ಒಳ್ಳೆಯ ಬೆಳವಣಿಗೆ ಎಂದರು.

ಟ್ರಸ್ಟ್‌ ಸದಸ್ಯ ಮುರಳಿಮೋಹನ್‌ ಕಾಟಿ ಮಾತನಾಡಿ, ಶಿಕ್ಷಣ, ಆರೋಗ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರೂಪಿಸುವುದು ಸಂಸ್ಥೆಯ ಉದ್ದೇಶವಾಗಿದೆ. ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ನೆರವು, ಸಾಂಸ್ಕೃತಿಕ ಹಬ್ಬ, ಶೈಕ್ಷಣಿಕ ಮಾರ್ಗದರ್ಶನ, ಚಿಂತನಾ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.

ಅಂತರರಾಷ್ಟ್ರೀಯ ಕ್ರೀಡಾಪಟು ಮಹೇಶ್‌, ವೈದ್ಯೆ ಡಾ.ಅಶ್ವಿನಿ, ಟ್ರಸ್ಟ್‌ನ ಅಧ್ಯಕ್ಷ ಅರೇಹಳ್ಳಿ ಮಧುಸೂದನ್‌, ಉಪಾಧ್ಯಕ್ಷ ಪ್ರಶಾಂತ್‌ಕುಮಾರ್‌, ಖಜಾಂಚಿ ನೇತ್ರಾವತಿ, ಪದಾಧಿಕಾರಿಗಳಾದ ಮುರಳೀಧರ, ಮಧುಗೌಡ, ಆನಂದ್‌, ಜಾನಕಿರಾಮ್‌ಸಿಂಗ್‌, ನಿರ್ಮಲಾ, ಗೋಪಾಲ್‌, ವೆಂಕಟೇಶ್‌ ಹಾಜರಿದ್ದರು.

ಕಾರ್ಯಕ್ರಮದಲ್ಲಿ 50 ಶಿಕ್ಷಕರನ್ನು ಸನ್ಮಾನಿಸಿ, ಗುರುವಂದನೆ ಸಲ್ಲಿಸಲಾಯಿತು. ಉಚಿತ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT