ರಸ್ತೆಗೆ ಇಳಿಯದ ಬಸ್

ಆನೇಕಲ್: ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೈಗೊಂಡಿದ್ದ ಬಸ್ ಬಂದ್ ಹಿನ್ನೆಲೆಯಲ್ಲಿ ಸಾರ್ವಜನಿಕರು ಆನೇಕಲ್ನಲ್ಲಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಬೆಳಿಗ್ಗೆ 7ರ ಸುಮಾರಿಗೆ ಕೆಲವು ಬಸ್ಗಳು ಡಿಪೊದಿಂದ ಬಸ್ನಿಲ್ದಾಣಕ್ಕೆ ಬಂದವು. ಆದರೆ, ಹಲವು ಮಂದಿ ಕಾರ್ಮಿಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಸ್ಗಳು ಸಂಚರಿಸಲಿಲ್ಲ. ಬೇಡಿಕೆ ಈಡೇರಿಕೆಗಾಗಿ ಪ್ರತಿಭಟನೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಾರ್ಮಿಕ ಮುಖಂಡರು ತಿಳಿಸಿದರು.
ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ಗಳು ರಸ್ತೆಗಿಳಿಯದ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಯಿತು. ಖಾಸಗಿ ಬಸ್ಗಳು ದರ ಏರಿಕೆ ಮಾಡಿದ್ದವು. ಆದರೂ, ಸಾರ್ವಜನಿಕರು ಖಾಸಗಿ ಬಸ್ಗಳನ್ನೇ ಅವಲಂಬಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.