ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಕತ್ವ ಬದಲಾವಣೆ ಇಲ್ಲ: ಎಂ.ಟಿ.ಬಿ

Last Updated 4 ಜನವರಿ 2022, 4:18 IST
ಅಕ್ಷರ ಗಾತ್ರ

ದೇವನಹಳ್ಳಿ: ‘ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸಿ ಅಧಿಕಾರಕ್ಕೆ ಬರುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ ನಾಗರಾಜ್ ತಿಳಿಸಿದರು.

ಪಟ್ಟಣದ ಶಾಂತಿನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬೆಳಗಾವಿಯಲ್ಲಿ ನಡೆದ ಕಾರ್ಯಕಾರಿಣಿಯ ತೀರ್ಮಾನದಂತೆ ಬಸವರಾಜ ಬೊಮ್ಮಾಯಿಯವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದು, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. 2023ರಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಸಾರ್ವತ್ರಿಕ ಚುನಾವಣೆಯಲ್ಲಿ ಅಧಿಕಾರಕ್ಕೆ ಬಂದು ಬಸವರಾಜ ಬೊಮ್ಮಾಯಿ ಅವರೇ ಮುಂದುವರೆಯುತ್ತಾರೆ ಎಂದು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟವಾಗಿ ಹೇಳಿದ್ದಾರೆ. ಹಿರಿಯ ಸಚಿವರನ್ನು ಬದಲಾಯಿಸುತ್ತಾರೆ ಎಂಬುದು ನನಗೆ ಗೊತ್ತಿಲ್ಲ. ಹೈಕಮಾಂಡ್ ತೀರ್ಮಾನ ಏನು ತೆಗೆದುಕೊಳ್ಳುತ್ತಾರೆ ಗೊತ್ತಿಲ್ಲ’ ಎಂದು ಹೇಳಿದರು.

ಮೇಕೆದಾಟು ಅನುಷ್ಠಾನ ಮಾಡಬೇಕು: ‘ವಿರೋಧಪಕ್ಷಗಳು ಹಾಗೂ ಆಡಳಿತ ಪಕ್ಷಗಳು ರಾಜಕೀಯ ಮಾಡಬೇಕು. ಚುನಾವಣೆಗಳು ಬಂದಾಗ ಮಾತ್ರ ರಾಜಕೀಯ ಮಾಡಬೇಕು. ಪಕ್ಷಾತೀತವಾಗಿ ಸಾರ್ವಜನಿಕರಿಗೆ ಸ್ಪಂದಿಸಬೇಕು. ಮೇಕೆದಾಟು ಪಾದಯಾತ್ರೆಯನ್ನು ಜ.9 ರಿಂದ ಕಾಂಗ್ರೆಸ್ಸಿನವರು ಕೈಗೊಳ್ಳುತ್ತಿದ್ದಾರೆ. ಈಗಾಗಲೇ ಮೇಕೆದಾಟು ಯೋಜನೆಯ ಡಿಪಿಆರ್ ಆಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇದನ್ನು ಅನುಷ್ಠಾನ ಮಾಡಬೇಕು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT