ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾನಿಟೈಸ್‌ ಕಾಣದ ಚಿಕ್ಕತತ್ತಮಂಗಲ: ಗ್ರಾಮಸ್ಥರ ಆಕ್ರೋಶ

ಮಂಡಿಬೆಲೆ ಗ್ರಾ.ಪಂ ಅಧ್ಯಕ್ಷೆ ಸ್ವಗ್ರಾಮ
Last Updated 3 ಮೇ 2021, 3:26 IST
ಅಕ್ಷರ ಗಾತ್ರ

ದೇವನಹಳ್ಳಿ (ವಿಜಯಪುರ): ‘ಮಂಡಿಬೆಲೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯ ಸ್ವಗ್ರಾಮ ಚಿಕ್ಕತತ್ತಮಂಗಲದಲ್ಲಿ ಇದುವರೆಗೂ ಸ್ಯಾನಿಟೈಸ್ ಮಾಡಿಲ್ಲ. ಸ್ವಚ್ಛತೆ ಮರೀಚಿಕೆಯಾಗಿದ್ದು, ಇತ್ತೀಚೆಗೆ ಕೊರೊನಾ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದರೂ ಅಧಿಕಾರಿಗಳು ಮುಂಜಾಗ್ರತೆ ತೆಗೆದುಕೊಳ್ಳುತ್ತಿಲ್ಲ’ ಎಂದು ಸ್ಥಳೀಯ ಮುಖಂಡ ಚಿನ್ನಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

‘ನಮ್ಮ ಗ್ರಾಮದಲ್ಲಿ 130 ಮನೆಗಳಿವೆ. 500 ಮಂದಿ ಮತದಾರರಿದ್ದಾರೆ, 900 ಜನಸಂಖ್ಯೆ ಇದೆ. ನಮ್ಮೂರಿನವರೇ ಅಧ್ಯಕ್ಷೆಯಾಗಿದ್ದರೂ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮಾಡಲು ಮುಂದಾಗಿಲ್ಲ. ಕುಡಿಯುವ ನೀರಿನ ಸಮಸ್ಯೆಯೂ ತೀವ್ರವಾಗಿದೆ. ಸರ್ಕಾರಿ ಶಾಲೆಯೊಂದರ ಗೋಡೆ ಅರ್ಧ ಕುಸಿದು ಬಿದ್ದಿದ್ದರೂ ಅದರ ಕಡೆಗೆ ಗಮನಹರಿಸಿಲ್ಲ’ ಎಂದು ದೂರಿದರು.

‘ಈ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನ ವಿಲ್ಲದಂತಾಗಿದೆ. ನಮ್ಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಹಳ್ಳಿಗಳ ಸದಸ್ಯರೇ, ತಮ್ಮ ಹಳ್ಳಿಗಳಲ್ಲಿ ಸ್ಯಾನಿಟೈಸ್ ಮಾಡಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಆದ್ದರಿಂದ ನಾವು ಸ್ಯಾನಿಟೈಸ್ ಮಾಡಿಲ್ಲ ಎಂದು ಬೇಜಾವಾಬ್ದಾರಿಯಿಂದ ಮಾತನಾಡುತ್ತಾರೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಇಷ್ಟೊಂದು ನಿರ್ಲಕ್ಷ್ಯ ಮಾಡಿದರೆ ಜನರ ಪರಿಸ್ಥಿತಿಯೇನು’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮುನಿರಾಜು ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯಲ್ಲಿನ ಎಲ್ಲಾ ಹಳ್ಳಿಗಳಲ್ಲಿ ಆಯಾ ಸದಸ್ಯರೇ, ಜಲಗಾರರ ಸಹಕಾರದಿಂದ ಸ್ಯಾನಿಟೈಸ್ ಮಾಡಿಕೊಂಡಿದ್ದಾರೆ. ಚಿಕ್ಕತತ್ತಮಂಗಲ ಗ್ರಾಮದಲ್ಲಿ ಸ್ಯಾನಿಟೈಸ್ ಮಾಡಲಿಕ್ಕೆ ಔಷಧಿಯನ್ನು ಕಳುಹಿಸಿಕೊಟ್ಟಿದ್ದೇವೆ. ಅವರೇ ಮಾಡಿಕೊಳ್ಳುತ್ತಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT