ಶುಕ್ರವಾರ, ಜೂಲೈ 10, 2020
22 °C

ವಿಮಾನ ನಿಲ್ದಾಣಕ್ಕೆ ಬಂದಿಳಿದ 533 ಅನಿವಾಸಿಗಳು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೇವನಹಳ್ಳಿ: ವಿವಿಧ ದೇಶಗಳಿಂದ ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಒಟ್ಟು 533 ಅನಿವಾಸಿ ಭಾರತೀಯರು ಬಂದಿಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ದುಬೈಯಿಂದ ಬಂದ ಅನಿವಾಸಿ ಭಾರತೀಯರಲ್ಲಿ 101 ಪುರುಷರು, 3 ಮಕ್ಕಳು, 76 ಮಹಿಳೆಯರು ಇದ್ದು ಯಾರಿಗೂ ಕೊರೊನಾ ಸೋಂಕು ಧೃಡಪಟ್ಟಿಲ್ಲ. ಮೆಲ್ಬೋರ್ನ್‌ನಿಂದ ಬಂದ ಪ್ರಯಾಣಿಕರಲ್ಲಿ ಒಂದು ಮಗು, 99 ಪುರುಷರು, 107 ಮಹಿಳೆಯರು ಸೇರಿ ಒಟ್ಟು 207 ಜನರಿದ್ದು ತಪಾಸಣೆ ವೇಳೆ ಸೋಂಕಿರುವುದು ಪತ್ತೆಯಾಗಿಲ್ಲ. ಟೊರೊಂಟೊದಿಂದ ಬಂದಿರುವ ಅನಿವಾಸಿ ಭಾರತೀಯರಲ್ಲಿ 11 ಮಕ್ಕಳು, 84 ಪುರುಷರು, 62 ಮಹಿಳೆಯರು ಇದ್ದಾರೆ. ಇವರಲ್ಲಿ ಸೋಂಕು ದೃಢಪಟ್ಟಿಲ್ಲ ಇವರೆಲ್ಲರನ್ನು ಬೇರೆ ಬೇರೆ ಸ್ಥಳಗಳಲ್ಲಿ ಕ್ವಾರೆಂಟೈನ್‌ಗೆ ಒಳಪಡಿಸಲಾಗಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು