ಭಾನುವಾರ, ಸೆಪ್ಟೆಂಬರ್ 22, 2019
25 °C

ಭಾವೈಕ್ಯ ಶಿಬಿರ; ಸೂಲಿಬೆಲೆ ವಿದ್ಯಾರ್ಥಿಗಳು ಆಯ್ಕೆ

Published:
Updated:
Prajavani

ಸೂಲಿಬೆಲೆ: ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಗೆ ಸೇವ ಮನೋಭಾವ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ದಾರಿಯಾಗಲಿದೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯಾಧಿಕಾರಿ ಡಾ.ಆದಿನಾರಾಯಣಪ್ಪ. ಎನ್.ಎ. ಹೇಳಿದರು.

ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರೀಯ ಯುವ ಭಾವೈಕ್ಯ ಶಾಂತಿ ಶಿಬಿರಕ್ಕೆ ಆಯ್ಕೆಯಾಗಿರುವ ಬಗ್ಗೆ  ಅವರು ಮಾತನಾಡಿದರು.

ರಾಷ್ಟ್ರೀಯ ಸೇವಾ ಶಿಬಿರದಲ್ಲಿ ದೇಶದ ಬೇರೆ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸುವುದರಿಂದ ಪರಸ್ಪರ ಸಂಸ್ಕೃತಿಯ ಕೊಡುಕೊಳ್ಳುವಿಕೆ, ಜ್ಞಾನದ ಸಂಗಮವಾಗಲಿದೆ ಎಂದರು.

ದೆಹಲಿಯಲ್ಲಿ ಇದೇ 21 ರವರೆಗೆ ಶಿಬಿರ ನಡೆಯಲಿದ್ದು, ಹಿರಿಯ ಗಾಂಧಿವಾದಿ ಡಾ.ಎಸ್.ಎನ್.ಸುಬ್ಬರಾವ್ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸೂಲಿಬೆಲೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಕಾಲೇಜಿನ ತಲಾ 10 ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆಯುತ್ತಿದ್ದಾರೆ.

Post Comments (+)