ದೇವನಹಳ್ಳಿ: ತಾಲ್ಲೂಕು ಕಚೇರಿ ರಸ್ತೆಯ ಕೊರಮರ ಬೀದಿಯ ಭಜನಾ ಮಂದಿರ ಮುಂಭಾಗದಲ್ಲಿ ಆಗಸ್ಟ್ 11 ರಂದು ಬೆಳಗ್ಗೆ 9 ಗಂಟೆಗೆ ನುಲಿಯ ಚಂದಯ್ಯ ಜಯಂತಿಯ ಜಿಲ್ಲಾ ಮಟ್ಟದ ಕಾರ್ಯಕ್ರಮ ನಡೆಯಲಿದೆ ಎಂದು ಹೆಚ್ಚವರಿ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ನುಲಿಯ ಚಂದಯ್ಯ ಜಯಂತಿ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಲಾ ಪ್ರದರ್ಶನ ನೀಡುವ ತಂಡ ನಿಯೋಜಿಸುವಂತೆ ಹಾಗೂ ನುಲಿಯ ಚಂದಯ್ಯ ಅವರ ವಿಚಾರಧಾರೆಗಳ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಹಾಗೂ ವಚನ ಗಾಯನ ಸೇರಿದಂತೆ ಅಗತ್ಯ ವ್ಯವಸ್ಥೆ ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಶಿಷ್ಠಾಚಾರಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ವಿತರಿಸಬೇಕು. ಅಂದು ಆವರಣದಲ್ಲಿ ಉಪಹಾರ ಮತ್ತು ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಬೇಕೆಂದು ನಿರ್ದೇಶಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿ, ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕಾರ್ಯಕ್ರಮ ಯಶಸ್ವಿಗೊಳಿಸಲು ಕೋರಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಕುಮಾರ್, ಶಾಲಾ ಶಿಕ್ಷಣ ಇಲಾಖೆಯ ವಿಶೇಷ ಪರಿವೀಕ್ಷಕ ಪದ್ಮಾವತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.