ಶನಿವಾರ, ಡಿಸೆಂಬರ್ 7, 2019
21 °C

‘ಪಟ್ಟಣದ ಅಭಿವೃದ್ಧಿಗೆ ಶ್ರಮಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಪಟ್ಟಣದ ಸರ್ವತೋಮುಖ ಅಭಿವೃದ್ಧಿ ವಿಚಾರದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಸಹಿಸುವುದಿಲ್ಲ ಎಂದು ಮುಖ್ಯಾಧಿಕಾರಿ ಎ.ಬಿ.ಪ್ರದೀಪ್‌ಕುಮಾರ್ ಎಚ್ಚರಿಕೆ ನೀಡಿದರು.

ಇಲ್ಲಿನ ಪುರಸಭೆ ಸಭಾಂಗಣದಲ್ಲಿ ಸಿಬ್ಬಂದಿಯೊಂದಿಗೆ ಸಭೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗಾಗಿ ಬರುವ ಸಾರ್ವಜನಿಕರು ವಿನಾಕಾರಣ ತೊಂದರೆಗೆ ಒಳಗಾಗುತ್ತಿದ್ದಾರೆ. ಜನರು ಪುರಸಭೆ ಮೇಲೆ ಇಟ್ಟಿರುವ ವಿಶ್ವಾಸ, ನಂಬಿಕೆ ಹೆಚ್ಚಿಸಬೇಕು ಎಂದು ತಾಕೀತು ಮಾಡಿದರು.

ಲಭ್ಯವಿರುವ ನೀರು ಸಮರ್ಪಕವಾಗಿ ಜನರಿಗೆ ಉಪಯೋಗವಾಗಬೇಕು. ಯಾವುದೇ ಸಮಸ್ಯೆಗಳಿದ್ದರೆ ಮುಕ್ತವಾಗಿ ಚರ್ಚೆ ನಡೆಸಿ ಪಾರದರ್ಶಕ ಆಡಳಿತಕ್ಕೆ ಸಹಕಾರ ನೀಡಬೇಕೆಂದು ಸೂಚನೆ ನೀಡಿದರು.

ಪುರಸಭಾ ವ್ಯವಸ್ಥಾಪಕ ಆಂಜನೇಯಲು, ಎಂಜಿನಿಯರ್ ಸುಪ್ರಿಯಾರಾಣಿ, ಕಂದಾಯ ಅಧಿಕಾರಿ ಜಯಕಿರಣ್, ಪರಿಸರ ಎಂಜಿನಿಯರ್‌ ಮಹೇಶ್‌ಕುಮಾರ್, ಅಜ್ಮತ್, ಗೋಪಾಲ್, ಲಕ್ಷ್ಮೀನಾರಾಯಣ, ನಾರಾಯಣಸ್ವಾಮಿ, ಸರಸ್ವತಮ್ಮ, ಪೂರ್ಣಿಮಾ, ಮಮತ, ಜ್ಯೋತಿ, ಇದ್ದರು.

ಪ್ರತಿಕ್ರಿಯಿಸಿ (+)