ಶನಿವಾರ, ಏಪ್ರಿಲ್ 17, 2021
28 °C
ಸರಳ ಆಚರಣೆಗೆ ಪಟ್ಟನಾಯಕನಹಳ್ಳಿಯ ನಂಜಾವಧೂತ ಸ್ವಾಮೀಜಿ ಚಾಲನೆ

ಓಂಕಾರೇಶ್ವರ ಸ್ವಾಮಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ವಿಜಯಪುರ: ಕೊರೊನಾ ಸೋಂಕು ದಿನೇ ದಿನೇ ಏರಿಕೆಯಾಗುತ್ತಿರುವ ಕಾರಣ, ಇತಿಹಾಸ ಪ್ರಸಿದ್ಧ ಓಂಕಾರೇಶ್ಪರಸ್ವಾಮಿ ಕಲ್ಲುಗಾಲಿ ಬ್ರಹ್ಮರಥೋತ್ಸವ ಸರಳವಾಗಿ ನೆರವೇರಿತು.

ಗುರಪ್ಪನಮಠದ ಓಂಕಾರೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಬ್ರಹ್ಮರಥೋತ್ಸವಕ್ಕೆ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಗುರುಗುಂಡಬ್ರಹ್ಮೇಶ್ವರಸ್ವಾಮಿ ಸಂಸ್ಥಾನ ಮಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಚಾಲನೆ ನೀಡಿದರು.

ರಥೋತ್ಸವದಲ್ಲಿ ಭಾಗವಹಿಸಿದ್ದ ಭಕ್ತರು ರಥಕ್ಕೆ ಬಾಳೇಹಣ್ಣು ದವನಗಳನ್ನು ಎಸೆದು, ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ದೇವರಲ್ಲಿ ಭಕ್ತಿಭಾವದಿಂದ ಹರಕೆ ಮಾಡಿಕೊಂಡರು, ಭಕ್ತರು ರಥವನ್ನು ಎಳೆದ ತಕ್ಷಣ ಮಂಗಳ ವಾದ್ಯಗಳು ಮೊಳಗಿದವು.

ನಂಜಾವಧೂತ ಸ್ವಾಮೀಜಿ ಮಾತನಾಡಿ, ಸುಮಾರು 251 ವರ್ಷಗಳ ಹಿಂದೆ ಸ್ಥಾಪನೆಗೊಂಡ ಗುರಪ್ಪನಮಠ ಹಾಗೂ ಶಿರಾ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿಗಳ ಮಠ, ಎರಡೂ ಕೂಡ ಅವಧೂತ ಪರಂಪರೆಯಲ್ಲಿ ಬಂದಿದ್ದು, ಎರಡೂ ಮಠಗಳು ಜನರಲ್ಲಿ ಸಾಮಾಜಿಕವಾಗಿ ಹಾಗೂ ಆಧ್ಯಾತ್ಮಿಕವಾಗಿ ಜ್ಞಾನವಂತರನ್ನು ಮಾಡುವತ್ತ ಶ್ರಮಿಸುತ್ತಿವೆ ಎಂದು ಹೇಳಿದರು.

ಮೊದಲೇ ನಿಗದಿ ಪಡಿಸಿದ್ದ ಬ್ರಹ್ಮರಥೋತ್ಸವವನ್ನು ಸರಳವಾಗಿ ನಡೆಸಿದ್ದು, ಗುರಪ್ಪನಮಠದ ಇತಿಹಾಸದಲ್ಲಿಯೇ ಇಷ್ಟು ಸರಳವಾಗಿ ರಥೋತ್ಸವ ನಡೆದದ್ದು ಇದೇ ಮೊದಲ ಬಾರಿಯಾಗಿದೆ. ಇಂತಹ ಕಠಿಣ ಸಂದರ್ಭದಲ್ಲಿ ಭಕ್ತರ ಸಹಕಾರವೂ ಕೂಡಾ ಬೇಕಾಗಿದೆ ಎಂದು ತಿಳಿಸಿದರು.

ದೇಶಕ್ಕೆ ಹಾಲು, ಹಣ್ಣು ತರಕಾರಿಗಳನ್ನು ಪೂರೈಸಿದ ಕೀರ್ತಿ ರೈತರಿಗೆ ಸಲ್ಲುತ್ತದೆ. ಜನರ ಜೀವನದ ಜೊತೆಗೆ ಚೆಲ್ಲಾಟವಾಡಬಾರದು. ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿ ಯೋಜನೆಯಡಿ ಹರಿಯುತ್ತಿರುವ ನೀರು ಎಷ್ಟರ ಮಟ್ಟಿಗೆ ಒಳ್ಳೆಯದು ಎನ್ನುವುದು ಪರಿಶೀಲನೆ ನಡೆಸಬೇಕು ಎಂದು  ಹೇಳಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು