ಅತ್ತಿಬೆಲೆ: ಗಾಂಜಾ ವಶ, ಒಬ್ಬನ ಸೆರೆ

ಆನೇಕಲ್ : ಅತ್ತಿಬೆಲೆ ಕೈಗಾರಿಕಾ ಪ್ರದೇಶದ ಗೆಸ್ಟ್ಲೈನ್ ಬಳಿ ದಾಳಿ ನಡೆಸಿದ ಪೊಲೀಸರು ವ್ಯಕ್ತಿಯೊಬ್ಬರಿಂದ 1 ಕೆ.ಜಿ 250 ಗ್ರಾಂ ಗಾಂಜಾ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಿಲಾಲ್ ಹುಸೇನ್(28) ಎಂದು ಗುರುತಿಸಲಾಗಿದ್ದು, ಆತ ಬಿಹಾರ ಮೂಲದವನು ಎಂದು ಅತ್ತಿಬೆಲೆ ಸರ್ಕಲ್ ಇನ್ಸ್ಪೆಕ್ಟರ್ ಸತೀಶ್ ತಿಳಿಸಿದ್ದಾರೆ.
‘ಆರೋಪಿ ತಟ್ಟನಹಳ್ಳಿ ಸಮೀಪದ ಅಮೆಜಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿದು ಬಂದಿದೆ. ವಿಚಾರಣೆ ಸಂದರ್ಭದಲ್ಲಿ, ಆರೋಪಿಯು ಅತ್ತಿಬೆಲೆ ಕೈಗಾರಿಕಾ ಪ್ರದೇಶದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದುದಾಗಿ ಒಪ್ಪಿಕೊಂಡಿದ್ದಾನೆ. ಅವನ
ಜೊತೆಗಿದ್ದ ಮತ್ತೊಬ್ಬ ಆರೋಪಿ ಇರ್ಫಾನ್ ಪಾಷಾ ಎಂಬಾತ ಪರಾರಿಯಾಗಿದ್ದಾನೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.