ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ದೇಶ, ಒಂದೇ ಸಮಾಜವೇ ಮಂತ್ರ

ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಜಯಂತಿಯಲ್ಲಿ ಕಂದಾಯ ಸಚಿವ ಅಶೋಕ್‌
Last Updated 15 ಏಪ್ರಿಲ್ 2021, 3:11 IST
ಅಕ್ಷರ ಗಾತ್ರ

ದೇವನಹಳ್ಳಿ: ‘ಶೋಷಿತ ಸಮುದಾಯಕ್ಕೆ ಶಿಕ್ಷಣದ ಹಕ್ಕನ್ನು ನೀಡಿದ ಮಹಾನ್ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್. ಅವರ ಆಶಯದಂತೆ ಒಂದೇ ದೇಶ, ಒಂದೇ ಸಮಾಜ ಮೂಲ ಮಂತ್ರದಲ್ಲಿ ಬದುಕಬೇಕು’ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಸಮಾಜಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ ಅವರ 130ನೇ ಜಯಂತಿ ಹಾಗೂ ಡಾ. ಬಾಬು ಜಗಜೀವನ ರಾಂ ಅವರ 114ನೇ ಜಯಂತಿಯ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಸ್ವಾತಂತ್ರ್ಯ ತಂದುಕೊಟ್ಟಂತಹ ಗಾಂಧೀಜಿಯವರನ್ನು ನಾವು ಹೇಗೆ ನೆನಪಿಸುತ್ತೇವೆ ಹಾಗೇ ಸಂವಿಧಾನ ರಚಿಸಿದ ಅಂಬೇಡ್ಕರ್‌ ಅವರನ್ನು ಅದಕ್ಕಿಂತ ಹೆಚ್ಚಾಗಿ ಗೌರವ ಸ್ಥಾನಮಾನವನ್ನು ಕೊಡುವುದು ಪ್ರತಿಯೊಬ್ಬರ ಕರ್ತವ್ಯ. ಕೇಂದ್ರ ಸರ್ಕಾರದ ಪ್ರಧಾನಿ ನರೇಂದ್ರ ಮೋದಿಯವರು ದೇಶ ಮತ್ತು ವಿದೇಶಗಳಲ್ಲಿ ಅವರು ಓದಿರುವಂತಹ ಕಾಲೇಜು, ಜನಿಸಿದ ಸ್ಥಳಗಳನ್ನು ಯಾತ್ರ ತಾಣವನ್ನಾಗಿಸಿ ವಿಶೇಷ ಅನುದಾನವನ್ನು ನೀಡುತ್ತಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನ ಚರಿತ್ರೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು’ ಎಂದರು.

ಶಾಸಕ ನಾರಾಯಣಸ್ವಾಮಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ‘ಅಂಬೇಡ್ಕರ್‌ ಅವರ ಮಾತುಗಳನ್ನು ಪಾಲಿಸುವುದರ ಮೂಲಕ ಪ್ರಜ್ಞಾವಂತ ಸಮಾಜ ನಿರ್ಮಾಣ ಮಾಡಬೇಕು. ಪ್ರಜ್ಞೆ (ಜ್ಞಾನ), ಪರಿವರ್ತನೆ(ಬದಲಾವಣೆ), ಸಮರ್ಪಣೆ ಎಂಬ ಮೂರು ಸಿದ್ಧಾಂತಗಳನ್ನು ಇಟ್ಟುಕೊಂಡು ಇಡೀ ದೇಶ ಮೆಚ್ಚುವಂತಹ ಸಂವಿಧಾನ ರಚಿಸಿದ್ದಾರೆ. ದೇಶದಲ್ಲಿ ಎಸ್‍ಸಿ, ಎಸ್‍ಟಿಗೆ ₹30 ಸಾವಿರ ಕೋಟಿ ಬಜೆಟ್‍ನಲ್ಲಿ ಕೇಂದ್ರ ಸರ್ಕಾರ ನೀಡುತ್ತದೆ. ಆ ಅನುದಾನ ಪೂರ್ತಿ ಬಳಕೆ ಮಾಡಿದರೆ ಪ್ರತಿಯೊಬ್ಬರಿಗೂ ಸೌಲಭ್ಯ ಸಿಗುವಂತೆ ಆಗುತ್ತದೆ. ಕಂದಾಯ ಸಚಿವ ಆರ್.ಅಶೋಕ್ ಆಸಕ್ತಿವಹಿಸಿದರೆ ಅಂಬೇಡ್ಕರ್ ಅಧ್ಯಯನ ಪೀಠಕ್ಕೆ 20 ಎಕರೆ ಜಾಗವನ್ನು ತಾಲೂಕಿನಲ್ಲಿ ಗುರುತಿಸಿಕೊಟ್ಟರೆ, ಮೀಸಲು ಕ್ಷೇತ್ರವಾಗಿರುವುದರಿಂದ ಅನುಕೂಲವಾಗುತ್ತದೆ. ಪ್ರತಿ ತಾಲೂಕಿನಲ್ಲಿಯೂ ಅಂಬೇಡ್ಕರ್ ಭವನ ಇದೆ, ಆದರೆ ಮೂಲಭೂತ ಸೌಕರ್ಯಗಳಿಲ್ಲ. ಬರುವ ಅನುದಾನದಲ್ಲಿ ಶೇ 2 ರಷ್ಟು ಮೀಸಲಿಟ್ಟರೆ ನಿರ್ವಹಣೆಗೆ ಸಾಕಷ್ಟು ಅನುಕೂಲವಾಗುತ್ತದೆ’ ಎಂದರು.

ಅಂಬೇಡ್ಕರ್ ಮತ್ತು ಜಗಜೀವನ್ ರಾಮ್ ಪ್ರಶಸ್ತಿಗಳನ್ನು ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಮುದಾಯದ ಮುಖಂಡರಿಗೆ ಹಾಗೂ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರವನ್ನು ನೀಡಿ ಅಭಿನಂದಿಸಲಾಯಿತು.

ದೊಡ್ಡಬಳ್ಳಾಪುರ ಶಾಸಕ ವೆಂಕಟರಮಣಯ್ಯ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಕೆ.ನಾಯಕ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಉಪಾಧ್ಯಕ್ಷೆ ರೂಪ ಮರಿಯಪ್ಪ, ಸಿಇಒ ಎಂ.ಆರ್.ರವಿಕುಮಾರ್, ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್, ಸದಸ್ಯೆ ಅನಂತಕುಮಾರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಎಸ್.ಕೃಷ್ಣಪ್ಪ, ತಹಶೀಲ್ದಾರ್ ಅನಿಲ್‍ಕುಮಾರ್‍ ಅರೋಲಿಕರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಚನ್ನಬಸಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪುಷ್ಪರಾಯ್ಕರ್, ಸಮುದಾಯದ ಮುಖಂಡರಾದ ಚೌಡಪ್ಪನಹಳ್ಳಿ ಲೋಕೇಶ್, ಕೆ.ವಿ.ಸ್ವಾಮಿ, ಬುಳ್ಳಹಳ್ಳಿ ರಾಜಪ್ಪ, ಮಾರಪ್ಪ, ಕಾರಹಳ್ಳಿ ಕೆಂಪಣ್ಣ, ತಾಲ್ಲೂಕು ಪಂಚಾಯಿತಿ ಸದಸ್ಯ ಕಾರಹಳ್ಳಿ ಶ್ರೀನಿವಾಸ್, ಸಮುದಾಯದ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT