ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆನ್‌ಲೈನ್‌ ವಿಶ್ವ ತಂಬಾಕು ರಹಿತ ದಿನಾಚರಣೆ

Last Updated 31 ಮೇ 2020, 15:35 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ನಗರದ ನವೋದಯ ಚಾರಿಟಬಲ್ ಟ್ರಸ್ಟ್ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾನಸಿಕ ಅರೋಗ್ಯ ವಿಭಾಗದ ಸಹಯೋಗದೊಂದಿಗೆ ವಿಶ್ವ ತಂಬಾಕುರಹಿತ ದಿನಾಚರಣೆ ಅಂಗವಾಗಿ ಆನ್‌ಲೈನ್ ವೆಬಿನಾರ್ ಮೂಲಕ ಯುವಜನತೆಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿಲ್ಲಾ ಅರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಮಾತನಾಡಿ, ‘ತಂಬಾಕು ದುಷ್ಪರಿಣಾಮಗಳ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಗೃತಿ ಮೂಡಿಸಲಾಗುತ್ತಿದ್ದು, ತಂಬಾಕು ಮಾರಾಟ ನಿಯಮ ಉಲ್ಲಂಘಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಕಾರ್ಯಪಡೆ ರಚಿಸಲಾಗುತ್ತಿದೆ’ ಎಂದರು.

ಜಿಲ್ಲಾ ಮನೋವೈದ್ಯರಾದ ಡಾ.ಗಿರೀಶ್,ಸಿಎಫ್‍ಟಿಎಫ್‍ಕೆ ಸಂಸ್ಥೆಯ ಸಂಸ್ಥಾಪನ ಕಾರ್ಯದರ್ಶಿ ಎಸ್.ಜೆ.ಚಂದರ್ ಮತ್ತು ಪರಿಸರವಾದಿ ಬಿ.ಟಿ.ರಾಘವೇಂದ್ರಪ್ರಸಾದ್ ಅವರು ತಂಬಾಕಿನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿಚಾರ ಮಂಡಿಸಿದರು.

ನವೋದಯ ಟ್ರಸ್ಟ್‌ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ, ‘ತಂಬಾಕು ಎಂಬ ಮಹಾಮಾರಿಗೆ ಇತ್ತೀಚಿನ ದಿನಗಳಲ್ಲಿ ಯುವ ಜನತೆ ಶೋಕಿಗಾಗಿ ಕಲಿತ ಹವ್ಯಾಸ ಮುಂದೆ ಚಟವಾಗಿ ಪರಿವರ್ತನೆ ಹೊಂದುತ್ತದೆ. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿ ಮಾರಣಾತಿಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಆದ ಕಾರಣ ತಂಬಾಕು ನಿಯಂತ್ರಣ ನಮ್ಮೆಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷದ ಮೇ31 ರಂದು ವಿಶ್ವ ತಂಬಾಕು ರಹಿತ ದಿನವೆಂದು ಘೋಷಿಸಿದೆ. ತಂಬಾಕು ಮುಕ್ತ ದೇಶ ನಿರ್ಮಿಸುವ ಪಣತೊಟ್ಟು ತಂಬಾಕು ಸೇವನೆಯಿಂದಾಗುವ ಮಾರಣಾಂತಿಕ ಕಾಯಿಲೆಗಳಿಗೆ ಮುಕ್ತಾಯ ಹಾಡಲು ಜಾಗೃತಿ ಮೂಡಿಸುವ ಪ್ರಯತ್ನ ಇದಾಗಿದೆ’ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಾನಸಿಕ ಅರೋಗ್ಯ ಅಧಿಕಾರಿ ಡಾ.ಶಾಂತಲ, ಸುರಾನಾ ಕಾಲೇಜಿನ ಪ್ರಾಂಶುಪಾಲರಾದ ಶಕುಂತಲಾ ಸ್ಯಾಮ್ಯುಯೆಲ್ಸನ್, ಸುರಾನ ಕಾಲೇಜಿನ ಮನೋವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ಅರ್ಚನಾ ಕೆ.ಭಟ್‌, ಎನ್‍ಎಸ್‍ಎಸ್ ವಿಭಾಗದ ಕಾರ್ಯಕ್ರಮ ಅಧಿಕಾರಿ ಗಿರೀಶ್ ಸೇರಿದಂತೆ ನವೋದಯ ಟ್ರಸ್ಟ್‍ನ ಪದಾಧಿಕಾರಿಗಳು, ಸುರಾನ ಕಾಲೇಜಿನ ಮನೋವಿಜ್ಞಾನ ವಿಭಾಗದ ಹಾಗೂ ಎನ್‍ಎಸ್‍ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT