ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಪ್ರತಿಮೆ ಸ್ಥಾಪನೆಗೆ ವಿರೋಧ

Last Updated 12 ಜೂನ್ 2020, 8:47 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ದಶಕಗಳ ಹಿಂದೆಯೇ ನಗರಸಭೆ ಸರ್ವ ಸದಸ್ಯರ ಸಭೆಯಲ್ಲಿ ಪ್ರವಾಸಿ ಮಂದಿರ ಸಮೀಪದ ವೃತ್ತಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತ ಎಂದು ನಾಮಕರಣ ಮಾಡಲಾಗಿದೆ. ಆದರೆ ಈಗ ಇದೇ ವೃತ್ತದ ಅಂಚಿನಲ್ಲಿ ಕೆಂಪೇಗೌಡ ಪ್ರತಿಮೆ ಸ್ಥಾಪನೆ ಮಾಡಲು ನಗರಸಭೆಯಿಂದ ಅನುಮತಿ ನೀಡಿರುವುದನ್ನು ಅಂಬೇಡ್ಕರ್‌ ಪ್ರತಿಮೆ ಪರ
ಸಂಘಟನೆ ಮುಖಂಡರು ತೀವ್ರವಾಗಿ ಖಂಡಿಸಿದ್ದಾರೆ.

ನಗರದ ಪ್ರವಾಸಿ ಮಂದಿರದಲ್ಲಿ ನಡೆದ ದಲಿತ ಸಂಘಟನೆ ಮುಖಂಡರ ಸಭೆಯಲ್ಲಿ ಮಾತನಾಡಿದ ಜಿ.ಲಕ್ಷ್ಮೀಪತಿ, ಮಾ.ಮುನಿರಾಜು, ಆದಿತ್ಯ ನಾಗೇಶ್‌, ಡಿ.ವಿ.ಅಶ್ವತ್ಥಪ್ಪ, ಬಾಲಕೃಷ್ಣ, ‘ಒಂದೇ ವೃತ್ತಕ್ಕೆ ಇಬ್ಬರು ವ್ಯಕ್ತಿಗಳ ಹೆಸರು ಅಥವಾ ಪ್ರತಿಮೆಗಳನ್ನು ಸ್ಥಾಪನೆ ಮಾಡಲು ಅನುಮತಿ ನೀಡಿರುವ ಕ್ರಮವೇ ಅವೈಜ್ಞಾನಿಕವಾಗಿದೆ. ಪ್ರವಾಸಿ ಮಂದಿರದ ಇಡೀ ವೃತ್ತಕ್ಕೆ ಡಾ.ಅಂಬೇಡ್ಕರ್‌ ಹೆಸರನ್ನು ನಾಮಕರಣ ಮಾಡಿರುವಾಗ ಇದೇ ವೃತ್ತದ ಅಂಚಿಗೆ ಕೆಂಪೇಗೌಡರ
ಪ್ರತಿಮೆ ಸ್ಥಾಪನೆ ಮಾಡಲು ಹೊರಟಿರುವುದು ಖಂಡನೀಯ. ಇದಕ್ಕೆ ನಮ್ಮ ವಿರೋಧ ಇದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿ ಇರುವುದರಿಂದ ವೃತ್ತದಲ್ಲಿ ನಾಮಫಲಕ ಅಳವಡಿಸಿಲ್ಲ. ಆದರೆ ಇದನ್ನೇ ನೆಪಮಾಡಿಕೊಂಡು ಕೆಂಪೇಗೌಡ ಪ್ರತಿಮೆ ಸ್ಥಾಪನೆ ಮಾಡಲು ಮುಂದಾದರೆ ಉಗ್ರಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ದಲಿತ ಮುಖಂಡರಾದ ಬಿ.ಮುನಿರಾಜು, ಅಂಜನಮೂರ್ತಿ, ಮುನಿಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT