ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ವಿರೋಧ

Last Updated 19 ನವೆಂಬರ್ 2020, 1:22 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ ಮಾಡುತ್ತಿರುವುದನ್ನು ವಿರೋಧಿಸಿ ಹಾಗೂ ಈ ನಿರ್ಧಾರ ಸರ್ಕಾರ ಹಿಂಪಡೆಯಬೇಕೆಂದು ಆಗ್ರಹಿಸಿ ಕನ್ನಡ ಸಂಘಟನೆಗಳ ಒಕ್ಕೂಟದಿಂದ ನಗರದ ತಾಲ್ಲೂಕು ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಆದೇಶ ಹೊರಡಿಸಿ ₹50ಕೋಟಿ ಮೀಸಲಿಟ್ಟಿರುವುದು ಇಡೀ ನಾಡಿನ ಕನ್ನಡಿಗರಿಗೆ ಮಾಡಿರುವ ವಂಚನೆಯಾಗಿದೆ. ಮುಂಬರುವ ಬೆಳೆಗಾವಿ ಲೋಕಸಭೆ ಹಾಗೂ ಬಸವಕಲ್ಯಾಣ ವಿಧಾನಸಭಾ ಚುನಾವಣೆಗಳಲ್ಲಿ ಮರಾಠಿಗರ ಮತಗಳನ್ನು ಪಡೆಯಲು ಮಾಡಿರುವ ಪ್ರಾಧಿಕಾರ ಕನ್ನಡಿಗರಿಗೆ ಮಾಡಿರುವ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಜಾಗೃತ ಪರಿಷತ್‌ ಕಾರ್ಯದರ್ಶಿ ಟಿ.ಎನ್.ಪ್ರಭುದೇವ್, ಕನ್ನಡಪರ ಹೋರಾಟಗಾರ ಜಿ.ಸತ್ಯನಾರಾಯಣ್, ತಾಲ್ಲೂಕು ಡಾ.ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸು.ನರಸಿಂಹಮೂರ್ತಿ, ಸಂಘಟನಾ ಕಾರ್ಯದರ್ಶಿ ಪರಮೇಶ್, ಶಿವರಾಜ್‍ಕುಮಾರ್ ಸೇನಾ ಸಮಿತಿ ಅಧ್ಯಕ್ಷ ರಮೇಶ್, ಜಿಲ್ಲಾ ಶಿವರಾಜ್‍ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಚೌಡರಾಜ್, ಕನ್ನಡ ಜಾಗೃತ ವೇದಿಕೆ ತಾಲ್ಲೂಕು ಅಧ್ಯಕ್ಷ ನಾಗರಾಜ್, ಕರವೇ ತಾಲೂಕು ಅಧ್ಯಕ್ಷ ಮರುಳಾರಾಧ್ಯ, ಕರುನಾಡ ವಿಜಯಸೇನೆ ಮುಖಂಡ ನಂಜಪ್ಪ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT