ಬುಧವಾರ, ಜೂನ್ 16, 2021
21 °C

ಪಾಲನಜೋಗಹಳ್ಳಿ ಸೀಲ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ವೇಗವಾಗಿ ಹರಡುತ್ತಿರುವ ಕೊರೊನಾ ಸೋಂಕನ್ನು ತಡೆಗಟ್ಟುವ ಸಲುವಾಗಿ ನಗರದ ಅಂಚಿನಪಾಲನಜೋಗಳ್ಳಿಯಲ್ಲಿ ಮೇ 24ರ ಸಂಜೆ 6ರವರೆಗೆ ಸಂಪೂರ್ಣ ಸೀಲ್‌ಡೌನ್‌ ಮಾಡಲಾಗುವುದು ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಪಾಲನಜೋಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲಾ ಆವರಣದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಪಾಲನಜೋಗಹಳ್ಳಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ ಮೆಡಿಕಲ್ ಸ್ಟೋರ್, ಆಸ್ಪತ್ರೆ ಹೊರತುಪಡಿಸಿ ಸೋಮವಾರದವರೆಗೆ ಕಟ್ಟುನಿಟ್ಟಿನ ಸೀಲ್‌ಡೌನ್‌ ಮಾಡಲಾಗುವುದು. ಮೇ 24ರ ಸಂಜೆ ರಾಜ್ಯ ಸರ್ಕಾರ ಹೊಸದಾಗಿ ಕೋವಿಡ್ ಮಾರ್ಗಸೂಚಿ ನಿಯಮ ಘೋಷಣೆ ನಂತರ ಹಾಗೂ ಈ ವ್ಯಾಪ್ತಿಯಲ್ಲಿ ಸೋಂಕಿನ ಸ್ಥಿತಿಗತಿ ಪರಿಗಣಿಸಿ ಸೀಲ್‌ಡೌನ್‌ ಮುಂದುವರೆಸುವ ಕುರಿತು ನಿರ್ಧರಿಸಲಾಗುವುದು ಎಂದರು.

ಸೋಂಕು ತಡೆಗಟ್ಟಲು ಕಟ್ಟುನಿಟ್ಟಿನ ಸೀಲ್‌ಡೌನ್‌ ಜಾರಿಯ ಪೊಲೀಸ್,ಕಂದಾಯ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲ್ಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸೋಮಶೇಖರ್,ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕುಮಾರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.