ಬುಧವಾರ, ಜುಲೈ 28, 2021
21 °C

ಉದ್ಯಾನ ಅಭಿವೃದ್ಧಿಗೆ ಸಹಭಾಗಿತ್ವ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರಸಭೆ ವ್ಯಾಪ್ತಿಯ ಮುತ್ತೂರು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಡಿ.ಮಾರ್ಟ್ ಸಮೀಪದಲ್ಲಿನ ಬಡಾವಣೆಯ ಉದ್ಯಾನವನ ಸ್ವಚ್ಛತಾ ಕಾರ್ಯಕ್ರಮ ಪರಿಸರ ಸಿರಿ ಕ್ಷೇಮಾಭಿವೃದ್ಧಿ ಸಂಘ ಮತ್ತು ನಗರಸಭೆ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು.

ನಗರಸಭೆ ಪೌರಾಯುಕ್ತ ರಮೇಶ್‌ ಎಸ್‌.ಸುಣಗಾರ್‌ ಮಾತನಾಡಿ, ‘ಹಾಳಾಗಿರುವ ಉದ್ಯಾನವನ್ನು ಸ್ವಚ್ಛತೆ ಮಾಡುವುದರ ಮೂಲಕ ಪರಿಸರ ಸಿರಿ ಕ್ಷೇಮಾಭಿವೃದ್ಧಿ ತಂಡ ವಿಶ್ವ ಪರಿಸರ ದಿನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದೆ. ಹಾಗೆಯೇ ಇದೇ ಲೇ ಔಟ್ ಗೆ ಸಂಬಂಧಿಸಿದಂತೆ ಉಳಿದ ಉದ್ಯಾನವನಗಳ ಸ್ವಚ್ಛತಾ ಕಾರ್ಯವನ್ನು ಕೈಗೆತ್ತಿಕೊಳ್ಳಲು ಹಾಗೂ ಅವಶ್ಯಕತೆ ಇರುವ ಸಹಕಾರವನ್ನು ನಗರಸಭೆ ವತಿಯಿಂದ ನೀಡುವುದಾಗಿ ತಿಳಿಸಿದರು.

ಬಿಜೆಪಿ ಮುಖಂಡ ಕೆ.ಬಿ.ಮುದ್ದಪ್ಪ ಮಾತನಾಡಿ, ‘ಪರಿಸರ ಸಿರಿ ಕ್ಷೇಮಾಭಿವೃದ್ಧಿ ತಂಡದವರು ಈಗಾಗಲೇ ಕೆರೆ, ಕಲ್ಯಾಣಿ ಹಾಗೂ ಪಾರ್ಕ್ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಂಡು ಇತರರಿಗೆ ಮಾದರಿಯಾಗುವಂತಹ ಕೆಲಸವನ್ನು ಮಾಡಿದ್ದಾರೆ’ ಎಂದು ಸಂಘದ ಕೆಲಸವನ್ನು ಶ್ಲಾಘಿಸಿದರು.

ಸಂಘದ ಅಧ್ಯಕ್ಷ ಮಂಜುನಾಥ್‌ರೆಡ್ಡಿ ಮಾತನಾಡಿ, ‘ಮುಂದಿನ ದಿನಗಳಲ್ಲಿ ನಗರದಲ್ಲಿ ಅಭಿವೃದ್ಧಿ ಭಾಗ್ಯದಿಂದ ವಂಚಿತವಾಗಿರುವ ಉದ್ಯಾನಗಳನ್ನು ಗುರುತಿಸಿ ಸ್ಥಳೀಯರ ಸಹಭಾಗಿತ್ವ ಹಾಗೂ ನಗರಸಭೆ ಸಿಬ್ಬಂದಿಯೊಂದಿಗೆ ಸೇರಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡು ನಿರ್ವಹಣೆ ಮಾಡುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಪರಿಸರ ಎಂಜಿನಿಯರ್ ಈರಣ್ಣ, ಪರಿಸರ ಸಿರಿ ಕ್ಷೇಮಾಭಿವೃದ್ಧಿ ಸಂಘದ ಸದಸ್ಯ ದಾಮೋದರ್‌ರೆಡ್ಡಿ, ಭಾಸ್ಕರ್,ಜಿ.ರಾಜಶೇಖರ್, ಮಂಜುನಾಥ್, ಸತೀಶ್, ಮಧು, ವೆಂಕೋಬರಾವ್, ಹರೀಶ್, ಶಂಕರ್, ರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.