ಭಾನುವಾರ, ಡಿಸೆಂಬರ್ 15, 2019
26 °C

‘ಜನಸ್ಪಂದನ’ದಲ್ಲಿ ಸಕ್ರಿಯವಾಗಿ ‍ಪಾಲ್ಗೊಳ್ಳಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ವಿಜಯಪುರ: ದೇವನಹಳ್ಳಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಡಿ.7ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ1ರವರೆಗೆ ‘ಪ್ರಜಾವಾಣಿ–ಡೆಕ್ಕನ್ ಹೆರಾಲ್ಡ್’ ಪತ್ರಿಕೆ ಮುಖಾಂತರ ನಡೆಯಲಿರುವ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ತಮ್ಮ ಅಹವಾಲು ಸಲ್ಲಿಸುವಂತೆ ಪುರಸಭಾ ಸದಸ್ಯ ಎಂ.ಸತೀಶ್ ಕುಮಾರ್ ಮನವಿ ಮಾಡಿದ್ದಾರೆ.

ಕಾರ್ಯಕ್ರಮಗಳಲ್ಲಿ ಶಾಸಕರು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜನಪ್ರತಿನಿಧಿಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸುವುದರಿಂದ ಸಾಕಷ್ಟು ಸಮಸ್ಯೆಗಳನ್ನು ಇತ್ಯರ್ಥಪಡಿಸಿಕೊಳ್ಳಲು ಉತ್ತಮವಾದ ವೇದಿಕೆಯಾಗಲಿದೆ.

ಜನರು ತಮ್ಮ ಸಮಸ್ಯೆಗಳನ್ನು ಹೊತ್ತು ದಿನನಿತ್ಯ ಕಚೇರಿಗಳಿಗೆ ಅಲೆದಾಡುತ್ತಿರುವುದು ಕಂಡು ಬರುತ್ತಿದ್ದು, ಇದನ್ನು ತಪ್ಪಿಸಲೆಂದು ಮಾಡುತ್ತಿರುವ ಇಂತಹ ಉತ್ತಮ ಕಾರ್ಯಕ್ರಮವನ್ನು ಜನರು ಸದುಪಯೋಗಪಡಿಸಿಕೊಳ್ಳಬೇಕು. ಇದುವರೆಗೂ ಬೆಂಗಳೂರು ನಗರದ ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ‘ಜನಸ್ಪಂದನ’ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಜನರು ಭಾಗವಹಿಸಿ, ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡಿದ್ದಾರೆ. ಊರಿನ ಜ್ವಲಂತ ಸಮಸ್ಯೆಗಳ ಬಗ್ಗೆ ಜನರು ಧ್ವನಿ ಎತ್ತುವ ಕಾರ್ಯಕ್ರಮವಾಗಿದ್ದು, ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಲಹೆ ನೀಡಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು