ದೊಡ್ಡಬಳ್ಳಾಪುರ: ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ನಿಷ್ಠಾವಂತ ಕಾರ್ಯಕರ್ತರಿದ್ದರೆ ಚುನಾವಣೆಗಳನ್ನು ಗೆಲ್ಲುವುದು ಕಷ್ಟವಲ್ಲ. ಈ ದಿಸೆಯಲ್ಲಿ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧಿಸಲು ತಾಲ್ಲೂಕಿನಲ್ಲಿ ಪಕ್ಷ ಸಂಘಟನೆಯನ್ನು ಸಮರ್ಪಕವಾಗಿ ಮಾಡಬೇಕು ಎಂದು ಜೆಡಿಎಸ್ ಕೋರ್ ಕಮಿಟಿ ರಾಜ್ಯ ಅಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ಹೇಳಿದರು.

ನಗರದ ಒಕ್ಕಲಿಗರ ಭವನದಲ್ಲಿ ಜೆಡಿಎಸ್ ವತಿಯಿಂದ ಶನಿವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ದೊಡ್ಡಬಳ್ಳಾಪುರದಲ್ಲಿ 60 ರಿಂದ 70 ಸಾವಿರ ಮತ ಪಡೆಯುತ್ತಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ 500 ಜನರೂ ಸಹ ಸೇರದೇ ಇರುವುದು ನೋವಿನ ಸಂಗತಿ. ರಾಜ್ಯದ ಚುನಾವಣೆಯಲ್ಲಿ ಒಟ್ಟು ಮತದಾರರ ಪೈಕಿ ಶೇ. 6 ರಷ್ಟು ಮತ ಪಕ್ಷದ ಚಿಹ್ನೆಗೆ ಬಿದ್ದದರೆ ಮಾತ್ರ ಚಿಹ್ನೆ ಉಳಿಸಿಕೊಳ್ಳಲು ಸಾಧ್ಯ. ಪಕ್ಷ ಕಟ್ಟುವಾಗ ದೇವೇಗೌಡರ ಶ್ರಮ ಸದಾ ನೆನೆಯಬೇಕು. ದೇವೆಗೌಡರು ಪ್ರಧಾನಿಯಾದ ಸಂದರ್ಭದಲ್ಲಿ ರಾಜ್ಯಕ್ಕೆ ಅನೇಕ ಯೋಜನೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ. 2006ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ 20 ತಿಂಗಳ ಅಧಿಕಾರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳನ್ನು ಮಾಡಿಸಿದ್ದಾರೆ ಎಂದು ತಿಳಿಸಿದ್ದಾರೆ.

‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಾಲೂಕಿನಲ್ಲಿ ಪಕ್ಷಕ್ಕೆ ಅವಕಾಶ ಸಿಗಬೇಕಾದರೆ ಸಾರ್ವಜನಿಕ ವಲಯದಲ್ಲಿ ಜೆಡಿಎಸ್ ಬಲವಾಗಿದೆ ಎನ್ನುವ ಅಭಿಪ್ರಾಯ ಮೂಡಿಸಬೇಕು. ಪಕ್ಷದಲ್ಲಿ ಗುಂಪುಗಾರಿಕೆ ಬಿಡಬೇಕು. ನಾವು ಗೆಲ್ಲಲು ನಿರಂತರವಾಗಿ ಪ್ರಯತ್ನ ಮಾಡಬೇಕು. ನಮ್ಮಲ್ಲಿ ಗುರಿ ಇರಬೇಕು. ಸಂಘಟನೆಯಿಂದ ಮಾತ್ರ ಚುನಾವಣೆ ಗೆಲ್ಲಲು ಸಾಧ್ಯ. ಪ್ರಬಲವಾಗಿ ಪಕ್ಷವನ್ನು ಕಟ್ಟುವ ಕೆಲಸ ಮಾಡಬೇಕು. ಇಂದಿನ ಕಾರ್ಯಕರ್ತರ ಸಭೆಯ ಅಭಿಪ್ರಾಯಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತರಲಾಗುವುದು. ಅವರು ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ’ ಎಂದರು.

ಜೆಡಿಎಸ್ ರಾಜ್ಯ ಕಾರ್ಯದರ್ಶಿ ಡಾ.ಎಚ್.ಜಿ.ವಿಜಯಕುಮಾರ್, ಸಾಲು ಸಾಲು ಚುನಾವಣೆಗಳು ಎದುರಾಗುತ್ತಿದ್ದು ಪಕ್ಷ ಬಲಿಷ್ಠವಾಗಿದ್ದು, ಸಂಘಟನೆ ಬೇಕಿದೆ. ಮುಂದೆ ಹೊಸ ಮುಖಂಡರಿಗೆ ಜವಾಬ್ದಾರಿ ನೀಡಿ ಬೂತ್ ಮಟ್ಟದಿಂದ ಪಕ್ಷವನ್ನು ಸದೃಢವಾಗಿಸಬೇಕು ಎಂದರು.

ಮುಖಂಡರಾದ ಹರೀಶ್ ಗೌಡ, ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಚೆನ್ನಿಗಪ್ಪ ಅವರಿಗೆ ಟಿಕೆಟ್ ನೀಡಿದ್ದರ ಫಲವಾಗಿ ಸ್ಥಳೀಯ ಮುಖಂಡರು ಟಿಕೆಟ್ನಿಂದ ವಂಚಿತರಾಗುವುದಲ್ಲದೇ ಪಕ್ಷಕ್ಕೆ ಹಾನಿಯಾಯಿತು ಎಂದರು.

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ, ವಿಧಾನಸಭೆ, ಲೋಕಸಭೆ ಚುನಾವಣೆಗೆ ಪಕ್ಷವನ್ನು ಬೂತ್ ಮಟ್ಟದಿಂದ ಸದೃಢಗೊಳಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಈ ನಿಟ್ಟಿನಲ್ಲಿ ಬೂತ್ ಕಮಿಟಿ ರಚಿಸಿ, ಬೂತ್ಗೆ ಇಬ್ಬರನ್ನು ನೇಮಕ ಹಾಗೂ 25 ಸದಸ್ಯರು ನೋಂದಣಿ ಮಾಡಲಾಗುತ್ತಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ತಿಳಿಸಿದರು.

ಜೆಡಿಎಸ್ ಚಿಕ್ಕಬಳ್ಳಾಪುರ ಘಟಕದ ಅಧ್ಯಕ್ಷ ಮುನಿಯಪ್ಪ, ಮಹಿಳಾ ಘಟಕದ ಜಿಲ್ಲಾ ಅಧ್ಯಕ್ಷೆ ದೇವರಾಜಮ್ಮ, ಯುವಘಟಕದ ಜಿಲ್ಲಾ ಅಧ್ಯಕ್ಷ ಸುನಿಲ್ ಕುಮಾರ್, ನಗರಸಭೆ ಉಪಾಧ್ಯಕ್ಷ ಎಂ.ಮಲ್ಲೇಶ್, ಸದಸ್ಯ ಟಿ.ಎನ್.ಪ್ರಭುದೇವ್, ಮುಖಂಡರಾದ ಚಿಕ್ಕರಾಮಕೃಷ್ಣಪ್ಪ, ನಾಗರಾಜ್, ಆರ್.ಕೆಂಪರಾಜು, ರಾಮಚಂದ್ರಪ್ಪ, ಆಂಜನಗೌಡ, ಶಿವಕುಮಾರ್, ಪುಟ್ಟರಾಜು ಇದ್ದರು.

ಮೈತ್ರಿ ಗೊಂದಲ ಪಕ್ಷ ಸಂಘಟನೆಗಾಗಿ ನಡೆಯುತ್ತಿರುವ ಈ ಸಭೆ ಉತ್ತಮ ಬೆಳವಣಿಗೆಯಾಗಿದೆ. ಆದರೆ ಈಗ ಕಾರ್ಯಕರ್ತರಿಗೆ ಮೈತ್ರಿ ವಿಚಾರ ಗೊಂದಲವಾಗಿದೆ. ಮುಂದೆ ವಿಧಾನಸಭಾ ಚುನಾವಣೆಯಲ್ಲಿ ಮೈತ್ರಿ ಆಗಲಿದೆ ಎಂದು ಕಾರ್ಯಕರ್ತರು ಸಕ್ರಿಯವಾಗುತ್ತಿಲ್ಲ. ಟಿಎಪಿಎಂಸಿಎಸ್ ಬಾಶೆಟ್ಟಿಹಳ್ಳಿ ಚುನಾವಣೆಗಳಲ್ಲಿಯೂ ಸಹ ಪಕ್ಷ ಹಿನ್ನಡೆ ಅನುಭವಿಸಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ವಿ.ಎಸ್. ರವಿಕುಮಾರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.