ವಾಹನ ಪೊಲೀಸ್‌ ವಶಕ್ಕೆ

ಬುಧವಾರ, ಜೂನ್ 19, 2019
28 °C

ವಾಹನ ಪೊಲೀಸ್‌ ವಶಕ್ಕೆ

Published:
Updated:
Prajavani

ವಿಜಯಪುರ: ಸರಕು ಸಾಗಾಣಿಕೆ ವಾಹನಗಳಲ್ಲಿ ಜನರನ್ನು ಸಾಗಾಣಿಕೆ ಮಾಡುವುದು ಅಪರಾಧ ಎಂದು ಜಾಗೃತಿ ಮೂಡಿಸುತ್ತಿದ್ದರೂ ಕೆಲ ವಾಹನಗಳ ಚಾಲಕರು ಅಂಥ ವಾಹನಗಳಲ್ಲಿ ಜನರನ್ನು ತುಂಬಿಕೊಂಡು ಹೋಗುತ್ತಿದ್ದಾರೆ. ಅಂತಹವರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಸಬ್‌ ಇನ್‌ಸ್ಪೆಕ್ಟರ್ ನರೇಶ್‌ ನಾಯಕ್ ತಿಳಿಸಿದ್ದಾರೆ.

ದ್ರಾಕ್ಷಿ ಕಟಾವು ಮಾಡಲು ಟೆಂಪೊಗಳಲ್ಲಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುವುದು, ಕ್ಯಾರೆಟ್ ಮೂಟೆಗಳ ಮೇಲೆ ಕಾರ್ಮಿಕರನ್ನು ಕೂರಿಸಿಕೊಂಡು ಹೋಗುವುದು, ಟಾಟಾ ಏಸ್‌ಗಳಲ್ಲಿ ಜನರನ್ನು ಕರೆದುಕೊಂಡು ಹೋಗುವುದನ್ನು ನಿಷೇಧ ಮಾಡಲಾಗಿದೆ. ಸಾಗಾಣಿಕೆ ಮಾಡುತ್ತಿರುವುದು ಕಂಡು ಬಂದರೆ ಅಂತಹ ವಾಹನಗಳ ಮಾಲೀಕರ ಮೇಲೆ ಪ್ರಕರಣ ದಾಖಲಿಸಿ ವಾಹನ ಚಾಲನಾ ಪರವಾನಗಿಯನ್ನು ರದ್ದುಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.

ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗಲು ಪ್ರತ್ಯೇಕವಾದ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಕಾರ್ಮಿಕರೂ ಕೂಡಾ ಕೂಲಿ ಆಸೆಗಾಗಿ ಪ್ರಾಣಗಳನ್ನು ಲೆಕ್ಕಿಸದೆ ಟೆಂಪೋಗಳ ಮೇಲೆ ಪ್ರಯಾಣಿಸುತ್ತಾರೆ. ಆಕಸ್ಮಾತ್ ಏನಾದರೂ ಅಪಾಯ ಸಂಭವಿಸಿದರೆ ಕುಟುಂಬಗಳಲ್ಲಿ ಅವರ ಮೇಲೆ ಅವಲಂಬಿತರಾಗಿರುವವರು ಅನಾಥರಾಗುತ್ತಾರೆ. ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಎಂದು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !