ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ವಿಮಾನ ನಿಲ್ದಾಣ: ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಹೆದರಿಸಿದ ಪ್ರಯಾಣಿಕ

Published 19 ಮೇ 2024, 14:03 IST
Last Updated 19 ಮೇ 2024, 14:03 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ 2ರಲ್ಲಿ ಭಾನುವಾರ ಚೆಕ್‌ ಇನ್‌ ಮಾಡುತ್ತಿದ್ದ  ಪ್ರಯಾಣಿಕನೊಬ್ಬ ತನ್ನ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಹುಯಿಲೆಬ್ಬಿಸಿ ಹುಚ್ಚಾಟ ಮಾಡಿದ್ದಾನೆ.

ಪುಣೆಗೆ ಹೊರಟಿದ್ದ ಹರಿಯಾಣದ ರಾಜೇಶ್‌ ಕುಮಾರ್‌ ಟರ್ಮಿನಲ್‌-2ರಲ್ಲಿ ಚೆಕ್‌ ಇನ್‌ ವೇಳೆ ತನ್ನ ಬ್ಯಾಗ್‌ನಲ್ಲಿ ಬಾಂಬ್‌ ಇದೆ ಎಂದು ಅಧಿಕಾರಿಗಳಿಗೆ ಹೇಳಿದ್ದಾನೆ.

ಇದರಿಂದ ಆತಂಕಗೊಂಡ ಅಧಿಕಾರಿಗಳು ಹಾಗೂ ಸಿಬ್ಬಂದಿ ಆತನ ಬ್ಯಾಗ್‌ ಪರಿಶೀಲಿಸಿದ್ದಾರೆ. ಬ್ಯಾಗ್‌ನಲ್ಲಿ ಏನೂ ಇರಲಿಲ್ಲ. ಕೂಡಲೇ ಪ್ರಯಾಣಿಕನನ್ನು ವಿಮಾನ ನಿಲ್ದಾಣ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.

‘ತಮಾಷೆಗಾಗಿ ಬ್ಯಾಗ್‌ನಲ್ಲಿ ಬಾಂಬ್ ಇದೆ ಎಂದು ಹೇಳಿದೆ’ ಎಂದು ರಾಜೇಶ್‌ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ. ಠಾಣಾ ಜಾಮೀನಿನ ಮೇಲೆ ಆತನನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT