ಭಾನುವಾರ, ಆಗಸ್ಟ್ 14, 2022
26 °C
ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಒತ್ತಾಯ

ಕೇಂದ್ರ ಮಾದರಿಯಲ್ಲಿ ವೇತನ ನೀಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಸರ್ಕಾರಿ ನೌಕರರಿಗೆ ಅನೇಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರಕ್ಕೆ ಒತ್ತಡ ತರಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ತಿಳಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸರ್ಕಾರಿ ನೌಕರರ ತಾಲ್ಲೂಕು ಮತ್ತು ಜಿಲ್ಲಾ ಸಂಘದ ವತಿಯಿಂದ ಭಾನುವಾರ ನಡೆದ 75ನೇ ಕನ್ನಡ ರಾಜ್ಯೋತ್ಸವ, ಜಿಲ್ಲಾ ಸರ್ಕಾರಿ ನೌಕರರ ಭವನ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಸರ್ಕಾರಿ ನೌಕರರು ಕಚೇರಿಗಳಿಗೆ ಅಲೆದಾಡಲು ತಪ್ಪಿಸಲು ಟಿಎ,ಡಿಎ ಸೇರಿದಂತೆ ಹಲವು ಸೌಲಭ್ಯಗಳನ್ನು ಆನ್‌ಲೈನ್‌ನಲ್ಲಿಯೇ ಪಡೆದುಕೊಳ್ಳುವಂತೆ ಮಾಡಲಾಗಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ಸರ್ಕಾರಿ ನೌಕರರಿಗೆ ವೇತನ ನೀಡಬೇಕು. ಈಗಾಗಲೇ 24 ರಾಜ್ಯಗಳಲ್ಲಿ ಸರ್ಕಾರಿ ನೌಕರರ ವೇತನ ಕೇಂದ್ರ ಸರ್ಕಾರದ ಮಾದರಿಯಲ್ಲಿಯೇ ನೀಡಲಾಗುತ್ತಿದೆ ಎಂದರು.

ಏ.1ರಿಂದ ಎಲ್ಲ ಸರ್ಕಾರಿ ನೌಕರರಿಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅವರ ಕುಟುಂಬದ ಎಲ್ಲ ಸದಸ್ಯರಿಗೆ ಮತ್ತು ಅವರ ತಂದೆ ತಾಯಿಗಳಿಗೂ ಅನ್ವಯವಾಗುವಂತೆ ಆರೋಗ್ಯ ಸಿಂಚನ ಕಾರ್ಯಕ್ರಮ ಜಾರಿಗೆ ತಂದು, ₹1200ಕೋಟಿ ಅನುದಾನ  ಸರ್ಕಾರ ಮೀಸಲು ಇಟ್ಟಿದೆ ಎಂದರು.

ರಾಜ್ಯದಲ್ಲಿ 55 ಸಾವಿರ ನೌಕರರಿಗೆ ಮುಂಬಡ್ತಿ ನೀಡಲಾಗಿದೆ. ಜಿಲ್ಲೆಯ ನೌಕರರಿಗೆ ಎಚ್‌ಆರ್‌ಎಂಎಸ್ ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆಯಲಾಗುವುದು. ಹೊಸ ಪಿಂಚಣಿ ಯೋಜನೆ ಕೈಬಿಟ್ಟು ಹಳೆ ಪಿಂಚಣಿ ಯೋಜನೆ ಮುಂದುವರಿಸಲು ಒತ್ತಾಯಿಸುವುದಾಗಿ ಹೇಳಿದರು.

ಜಿಲ್ಲಾಕಾರಿ ಪಿ.ಎನ್.ರವೀಂದ್ರ ಮಾತನಾಡಿ, ಸರ್ಕಾರಿ ನೌಕರರ ಭವನ ಕಟ್ಟುವುದರ ಮೂಲಕ 10ಗುಂಟೆ ಜಾಗ ಮೀಸಲು ಇಡಲಾಗಿದೆ ಎಂದು ಹೇಳಿದರು

ಜಿಪಂ ಸಿಇಒ ಎನ್.ಎಂ.ನಾಗರಾಜ್, ಉಪವಿಭಾಗಾಕಾರಿ ಅರುಳ್‌ಕುಮಾರ್, ನೌಕರರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಗೌಡಪ್ಪ ಪಾಟೀಲ, ಖಜಾಂಚಿ ಆರ್.ಶ್ರೀನಿವಾಸ್, ಗೌರವಾಧ್ಯಕ್ಷ ಶಿವರುದ್ರಯ್ಯ, ವಿಭಾಗೀಯ ಉಪಾಧ್ಯಕ್ಷ ಆರ್.ಮೋಹನ್, ಜಿಲ್ಲಾ ಗೌರವಾಧ್ಯಕ್ಷ ಆರ್.ಮುನಿಶಾಮಪ್ಪ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ವಿಜಯ್‌ಕುಮಾರ್, ದೇವನಹಳ್ಳಿ ತಾಲೂಕು ಅಧ್ಯಕ್ಷ ಎಚ್.ಬಾಲಕೃಷ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಗಂಗಾಧರಪ್ಪ, ಖಜಾಂಚಿ ಮೊಹಮ್ಮದ್ ಮುಜಾಮಿಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.