ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿರಿಧಾನ್ಯಗಳ ಬಳಕೆ ಹೆಚ್ಚಾಗಲಿ: ಶಾಸಕ ಟಿ.ವೆಂಕಟರಮಣಯ್ಯ

Last Updated 24 ಜನವರಿ 2021, 5:49 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಪ್ರಜ್ಞಾವಂತರ ಆಹಾರವಾಗಿರುವ ಸಿರಿಧಾನ್ಯ ಕುರಿತು ವ್ಯಾಪಕ ಪ್ರಚಾರ ನೀಡಲು ಸಾವಯವ ಉತ್ಪನ್ನಗಳ ಮಾರುಕಟ್ಟೆಗೆ ಹೆಚ್ಚಿನ ಆದ್ಯತೆ ನೀಡಲು ಕೃಷಿ ಇಲಾಖೆ ಆಯೋಜಿಸಿದ್ದ ‘ಸಿರಿಧಾನ್ಯಗಳ ನಡಿಗೆ ಆರೋಗ್ಯದ ಕಡೆಗೆ’ ಮ್ಯಾರಥಾನ್‌ಗೆ ಶಾಸಕ ಟಿ.ವೆಂಕಟರಮಣಯ್ಯ ಶನಿವಾರ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ರೈತರ ಕೊಡುಗೆ ಮಹತ್ವದ್ದಾಗಿದೆ. ಜನರ ಮನವೊಲಿಸಿ ಸಾವಯವ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮ್ಯಾರಥಾನ್‌ ಆಯೋಜಿಸಲಾಗಿದೆ. ಈಚೆಗೆ ಕ್ರಿಮಿನಾಶಕ, ರಸಗೊಬ್ಬರಗಳ ಅತಿಯಾದ ಬಳಕೆಯಾಗುತ್ತಿದೆ. ಆರೋಗ್ಯಕರ ಆಹಾರದ ಕಡೆ ಗಮನಹರಿಸಬೇಕಿದೆ ಎಂದರು.

ರಾಸಾಯನಿಕ ಬಳಕೆಯಿಂದ ಮಣ್ಣಿನ ಫಲವತ್ತತೆ ನಾಶವಾಗುತ್ತಿದೆ. ಹಿರಿಯರಿಂದ ಬಳುವಳಿಯಾಗಿ ಬಂದಿ
ರುವ ಮಣ್ಣು ರಕ್ಷಿಸಿಕೊಳ್ಳಬೇಕಿದೆ ಎಂದರು.

ಪ್ರವಾಸಿ ಮಂದಿರ ವೃತ್ತದಿಂದ ಬೆಳಿಗ್ಗೆ 7ಕ್ಕೆ ಆರಂಭವಾದ ಮ್ಯಾರಥಾನ್ ನಗರದ ಕೋರ್ಟ್ ರಸ್ತೆ, ತಾಲ್ಲೂಕು ಕಚೇರಿ ರಸ್ತೆ, ಬಸವ ಭವನದ ಮೂಲಕ ಮೂರು ಕಿ.ಮೀ ಮ್ಯಾರಥಾನ್‌ ಮತ್ತೆ ಪ್ರವಾಸಿ ವೃತ್ತದಲ್ಲಿ ಕೊನೆಗೊಂಡಿತು.

ಇದೇ ಸಂದರ್ಭದಲ್ಲಿ ಸಾಮೂಹಿಕ ವ್ಯಾಯಾಮ, ಲಾಂಛನ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಎಪಿಎಂಸಿ ಅಧ್ಯಕ್ಷ ವಿಶ್ವನಾಥರೆಡ್ಡಿ, ಜಂಟಿ ಕೃಷಿ ನಿರ್ದೇಶಕ ಜಯಸ್ವಾಮಿ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ನಗರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಸೋಮಶೇಖರ್, ತೋಟಗಾರಿಕೆ ಇಲಾಖೆ ಹಿರಿಯ ನಿರ್ದೇಶಕ ಶ್ರೀನಿವಾಸ್, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ, ತಾಂತ್ರಿಕ ಅಧಿಕಾರಿ ರೂಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT