ಶನಿವಾರ, ನವೆಂಬರ್ 28, 2020
22 °C

ಲ್ಯಾಬ್‌ ಟೆಕ್ನಿಷಿಯನ್ ನೇಮಿಸಿ: ಎಂ.ಎನ್. ನಾಗರಾಜ್‍

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ತಾಲ್ಲೂಕಿನ ಕುಂದಾಣ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಲ್ಯಾಬ್ ಟೆಕ್ನಿಷಿಯನ್‌ ನೇಮಿಸಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಎನ್. ನಾಗರಾಜ್‍ ಅವರಿಗೆ ಪ್ರಗತಿಪರ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿದರು.

ಕರ್ನಾಟಕ ಬಹುಜನ ಹಿತರಕ್ಷಣೆ ವೇದಿಕೆಯ ರಾಜ್ಯ ಘಟಕದ ಅಧ್ಯಕ್ಷ ಎಂ. ನರಸಿಂಹ ಮಾತನಾಡಿ, ಹೋಬಳಿ ಕೇಂದ್ರವಾಗಿರುವ ಕುಂದಾಣ ಗ್ರಾಮದ ವ್ಯಾಪ್ತಿ 25ಕ್ಕೂ ಹೆಚ್ಚು ಗ್ರಾಮಗಳಿವೆ. ವಿವಿಧ ರೋಗಗಳಿಂದ ಬಳಲುವ ನೂರಾರು ರೋಗಿಗಳು ದೂರದ ದೇವನಹಳ್ಳಿ ಮತ್ತು ದೊಡ್ಡ ಬಳ್ಳಾಪುರದ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ ರೋಗದ ತಪಾಸಣೆ ಮತ್ತು ಪರೀಕ್ಷೆ ಮಾಡಿಸುತ್ತಾರೆ. ಕೋವಿಡ್‌ ಸಂಕಷ್ಟದಲ್ಲಿ ರೋಗಿಗಳಿಗೆ ತೊಂದರೆಯಾಗುತ್ತಿದೆ’ ಎಂದರು.

ಈ ಹಿಂದೆ ಲ್ಯಾಬ್ ಟೆಕ್ನಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗಂಗಾಧರ್ ಎಂಬುವವರನ್ನು ದೇವನಹಳ್ಳಿ ಸಮುದಾಯದ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ. ಇದರಿಂದ ಸ್ಥಳೀಯ ರೋಗಿಗಳಿಗೆ ಕಷ್ಟವಾಗುತ್ತಿದೆ ಎಂದರು.

ಚಲವಾದಿ ಮಹಾಸಭಾದ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ವಿ. ಸ್ವಾಮಿ ಹಾಜರಿದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.