ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾರಂಭಗಳಿಗೆ ಅನುಮತಿ ಕಡ್ಡಾಯ

Last Updated 21 ಏಪ್ರಿಲ್ 2021, 5:22 IST
ಅಕ್ಷರ ಗಾತ್ರ

ಸೂಲಿಬೆಲೆ: ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ಸಲುವಾಗಿ ಸರ್ಕಾರದ ಸೂಚನೆಯಂತೆ ವ್ಯಕ್ತಿಗತ ಅಂತರ, ಮಾಸ್ಕ್ ಬಳಕೆ ಇನ್ನಿತರ ಮುಂಜಾಗ್ರತ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ತಾಲ್ಲೂಕಿನ ಎಲ್ಲ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸೋಮವಾರ ಮತ್ತು ಮಂಗಳವಾರ ಹಮ್ಮಿಕೊಳ್ಳಲಾಗಿತ್ತು ಎಂದು ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥಗೌಡ ತಿಳಿಸಿದರು.

ವ್ಯಾಪಾರ ಮಾಡುವ ವರ್ತಕರು ತಮ್ಮ ಅಂಗಡಿಗಳ ಮುಂದೆ ಗ್ರಾಹಕರು ವ್ಯಕ್ತಿಗತ ಅಂತರ ಕಾಪಾಡಲು ಗುರುತು (ಮಾರ್ಕ್) ಹಾಕಬೇಕು. ಇದಕ್ಕೆ 2 ದಿನಗಳ ಕಾಲಾವಕಾಶ ನೀಡಲಾಗಿದೆ. ವರ್ತಕರು ಮತ್ತು ಗ್ರಾಹಕರು ಮಾಸ್ಕ್ ಧರಿಸಿ ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ನಿಯಮಗಳನ್ನು ಉಲ್ಲಂಘಿಸದರೆ ಅಂಗಡಿ ಮಾಲಿಕರಿಗೆ ಸರ್ಕಾರದ ಸೂಚನೆಯಂತೆ ₹10 ಸಾವಿರ ದಂಡ ವಿಧಿಸಲಾಗುವುದು ಎಂದರು.

ಸಮಾರಂಭಗಳಿಗೆ ಅನುಮತಿ ಕಡ್ಡಾಯ: ಮದುವೆ ಸಮಾರಂಭಗಳು, ಇನ್ನಿತರ ಕಾರ್ಯಕ್ರಮಗಳಿಗೆ ತಾಲ್ಲೂಕು ಕೊರೊನಾ ಟಾಸ್ಕ್ ಫೋರ್ಸ್ ಅಧ್ಯಕ್ಷರಾದ ತಹಶೀಲ್ದಾರ್ ಅವರಿಂದ ಅನುಮತಿ
ಪಡೆಯುವುದು ಕಡ್ಡಾಯವಾಗಿದೆ. ಅನುಮತಿ ಪಡೆಯದೆ ಕಾರ್ಯಕ್ರಮ, ಸಮಾರಂಭಗಳನ್ನು ಆಯೋಜಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮಾಸ್ಕ್ ಬಳಸದ ವ್ಯಕ್ತಿಗಳಿಗೆ ದಂಡ: ಕಳೆದ 2-3 ದಿನಗಳಿಂದ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮಾಸ್ಕ್ ಬಳಸುವುದು, ಅಂತರ ಕಾಯ್ದುಕೊಳ್ಳುವುದರ ಬಗ್ಗೆ ಜಾಗೃತಿ ಮೂಡಿಸಲಾಯಿತು. ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದವರ ಮೇಲೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 3.30ಕ್ಕೆ ತಾಲ್ಲೂಕಿನ ಎಲ್ಲ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ 614 ವ್ಯಕ್ತಿಗಳಿಗೆ ದಂಡ ಹಾಕಲಾಗಿದೆ. ಉಚಿತವಾಗಿ ಮಾಸ್ಕ್ ನೀಡಿ ಅರಿವು ಮೂಡಿಸಲಾಯಿತು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT