ಪೆಟ್ರೋಲ್‌ ,ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಂದ್‌

7
ದೇಶದ ಆರ್ಥಿಕ ಸ್ಥಿತಿ ವಿಷಮ ಸ್ಥಿತಿಗೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಪೆಟ್ರೋಲ್‌ ,ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಬಂದ್‌

Published:
Updated:
Deccan Herald

ದೇವನಹಳ್ಳಿ: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಸೆ.10ರಂದು ದೇವನಹಳ್ಳಿಯಲ್ಲಿ ಕಾಂಗ್ರೆಸ್ ವತಿಯಿಂದ ಬಂದ್‌ ನಡೆಸಲಾಗುವುದು ಎಂದು ಕೆಪಿಸಿಸಿ ಹಿಂದುಳಿದ ವರ್ಗ ಜಿಲ್ಲಾ ಘಟಕ ಅಧ್ಯಕ್ಷ ನಾಗಮಂಗಲ ಅಪ್ಪಣ್ಣ ತಿಳಿಸಿದರು.

ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. 2014ರ ಚುನಾವಣೆಯಲ್ಲಿ ಬಿಜೆಪಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಪ್ರಮುಖ ವಿಷಯವನ್ನಾಗಿ ಇಟ್ಟುಕೊಂಡು ಪ್ರಚಾರ ಗಿಟ್ಟಿಸಿಕೊಂಡಿತ್ತು. ಮತದಾರರಿಗೆ ಮಂಕುಬೂದಿ ಎರಚಿದ ನರೇಂದ್ರ ಮೋದಿ ಪ್ರಧಾನಿ ಆಗಿದ್ದಾರೆ. ಅವರ ನಾಲ್ಕುವರೆ ವರ್ಷ ಆಡಳಿತದಲ್ಲಿ ಎಷ್ಟು ಬಾರಿ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ. ತಮ್ಮ ಮನ್ ಕಿ ಬಾತ್‌ನಲ್ಲಿಯೇ ತಲ್ಲೀನರಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಪೆಟ್ರೋಲ್, ಡೀಸೆಲ್ ಬೆಲೆ ಪ್ರತಿನಿತ್ಯ ಪೈಸೆಗಳ ಲೆಕ್ಕದಲ್ಲಿ ಏರಿಕೆಯಾಗುತ್ತಿದೆ. ಮಾಸಿಕ ಮತ್ತು ತ್ರೈ ಮಾಸಿಕವಾಗಿ ಏರಿಕೆ ಮಾಡಿದರೆ ಗ್ರಾಹಕರು ಬಿಜೆಪಿ ವಿರುದ್ಧ ತಿರುಗಿ ಬಿಳುವ ಸಾಧ್ಯತೆ ಅರಿತು ಈ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಮತದಾರರು ದಡ್ಡರಲ್ಲ ಎಂಬುದನ್ನು ಕೇಂದ್ರ ಸರ್ಕಾರ ಅರಿತುಕೊಳ್ಳಬೇಕು ಎಂದು ಟೀಕಿಸಿದರು.

ಪ್ರಧಾನಿ ಮೋದಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳು ಸುಳ್ಳಿನ ಸರಮಾಲೆ ಎಂಬುದು ಮತದಾರರಿಗೆ ಅರ್ಥವಾಗ ತೊಡಗಿದೆ. ದಿನನಿತ್ಯ ಬಳಕೆ ವಸ್ತುಗಳು ಗಗನ ಮುಖಿಯಾಗಿವೆ. ಕೇಂದ್ರ ಸರ್ಕಾರ ಬಡ ಗ್ರಾಹಕರ ಮೇಲೆ ಬರೆ ಎಳೆದು ತಲ್ಲಣಗೊಳಿಸಿದೆ. ದೇಶದ ಆರ್ಥಿಕ ಸ್ಥಿತಿ ತೀರ ವಿಷಮ ಪರಿಸ್ಥಿತಿಗೆ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೆಪಿಸಿಸಿ ಜಿಲ್ಲಾ ಘಟಕ ಪ್ರಧಾನ ಕಾರ್ಯದರ್ಶಿ ಪ್ರಸನ್ನಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿಮಂಜುನಾಥ್, ಬೈಯಾಪ ಸದಸ್ಯರಾದ ಶ್ರೀರಾಮಯ್ಯ, ಎನ್.ಟಿ.ನಾಗೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾರುತಿ, ಉಪಾಧ್ಯಕ್ಷ ಪುರುಷೋತ್ತಮ್ ಕುಮಾರ್, ಖಾದಿ ಬೋರ್ಡ್ ನಿರ್ದೇಶಕ ಶ್ರೀನಿವಾಸ್, ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಸಂಪಂಗಿಗೌಡ, ಪುರಸಭೆ ಸದಸ್ಯ ಜಿ.ಎನ್.ವೇಣು ಗೋಪಾಲ್, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ವೇಣು ಗೋಪಾಲ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !