ದೊಡ್ಡಬಳ್ಳಾಪುರ: ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಸುತ್ತಮುತ್ತಲ ಪ್ರದೇಶದಲ್ಲಿ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ನಿಷೇಧಗೊಳಿಸಿ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಆದೇಶ ಹೊರಡಿಸಿದ್ದಾರೆ.

ಥರ್ಮಕೋಲ್, ಪ್ಲಾಸ್ಟಿಕ್ ಮತ್ತು ಮೈಕ್ರೋ ಬೀಡ್ಸ್ನಿಂದ ತಯಾರಾದ ಪ್ಲಾಸ್ಟಿಕ್ ವಸ್ತುಗಳ ಕೊಂಡೊಯ್ಯುವಿಕೆ, ಬಳಕೆ ಮತ್ತು ಮಾರಾಟ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಇಲ್ಲಿರುವ ಸಸ್ಯ ಸಂಕುಲ, ಪ್ರಾಣಿ–ಪಕ್ಷಿ, ಸೂಕ್ಷ್ಮ ಜೀವಿಗಳು, ಮಾನವ ಸಂಕುಲ ಸಂರಕ್ಷಿಸುವ ಹಾಗೂ ಇಲ್ಲಿನ ಪ್ರಾಕೃತಿಕ ಸೊಬಗಿನ ನೈರ್ಮಲ್ಯತೆ ಕಾಪಾಡುವ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಆದೇಶ ಪಾಲಿಸಲು ಘಾಟಿ ಗ್ರಾಮ ಪಂಚಾಯಿತಿಯಿಂದ ಪ್ಲಾಸ್ಟಿಕ್ ತಪಾಸಣೆ ಚೆಕ್ ಪೋಷ್ಟ್ ನಿರ್ಮಿಸುವಂತೆ ಹಾಗೂ ಪ್ಲಾಸ್ಟಿಕ್ ನಿಷೇಧ ಕುರಿತ ಸೂಚನಾ ಫಲಕ ಅಳವಡಿಸುವಂತೆ ಸೂಚಿಸಲಾಗಿದೆ. ಏಕ ಬಳಕೆಯ ಪ್ಲಾಸ್ಟಿಕ್ ಸಾಮಗ್ರಿಗಳನ್ನು ತಪಾಸಣೆ ನಡೆಸಿ, ನಿರ್ಬಂಧಿಸುವಂತೆ ತಿಳಿಸಿದ್ದಾರೆ.

ಅಭಿವೃದ್ಧಿ ಕಾಮಗಾರಿ ಪರಿಶೀಲನೆ

ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಭಕ್ತರ ಅನುಕೂಲಕ್ಕಾಗಿ ವಿವಿಧ ಕಾಮಗಾರಿ ಕೈಗೊಳ್ಳಲಾಗಿದ್ದು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಕ್ಷೇತ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಲೋಕೋಪಯೋಗಿ ಇಲಾಖೆಯ ಮುಖ್ಯ ವಾಸ್ತು ತಜ್ಞರಾದ ರಾಜೇಶ್ವರಿ ಕ್ಷೇತ್ರಕ್ಕೆ ಭೇಟಿ ನೀಡಿ, ಘಾಟಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ದಾಸೋಹ ಭವನ ನಿರ್ಮಾಣ ಕಾಮಗಾರಿ, ಕ್ಯೂ ಕಾಂಪ್ಲೆಕ್ಸ್, ಆಡಳಿತ ಕಚೇರಿ ಹಾಗೂ ಇನ್ನಿತರೆ ಕಾಮಗಾರಿಗಳ ಬಗ್ಗೆ ಚರ್ಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.