ಶನಿವಾರ, ಆಗಸ್ಟ್ 13, 2022
27 °C
ಪೊಲೀಸರ ಮೇಲೆ ಹಲ್ಲೆ ಯತ್ನ

ದೊಡ್ಡಬಳ್ಳಾಪುರ: ಹತ್ಯೆ ಆರೋಪಿಗಳಿಗೆ ಗುಂಡೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಹತ್ಯೆ ಪ್ರಕರಣದ ಆರೋಪಿಗಳಾದ ಹೇಮಂತ್ ಮತ್ತು ಸೋನು ಎಂಬುವವರನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿ ಆರೋಪಿಗಳನ್ನು ಬಂಧಿಸಿರುವ ಘಟನೆ ದೊಡ್ಡಬೆಳವಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆಸ್ತೂರು ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ.

ಆಗಸ್ಟ್‌‌ 16ರಂದು ಆರೋಪಿಗಳು ತಾಲ್ಲೂಕಿನ ಹುಲಿಕುಂಟೆ ಗ್ರಾಮದ ತೋಟದ ಮನೆಯಲ್ಲಿ ಕುಡಿಯಲು ನೀರು ಕೇಳುವ ನೆಪದಲ್ಲಿ ನುಗ್ಗಿ ಮಂಜುನಾಥ್ (21) ಎನ್ನುವ ಯುವಕನ ಹತ್ಯೆ ನಡೆಸಿದ್ದರು. ಸರ್ಕಲ್ ಇನ್‌ಸ್ಪೆಕ್ಟರ್‌‌ ರಾಘವ ಎಸ್.ಗೌಡ ಹಾಗೂ ದೊಡ್ಡಬೆಳವಂಗಲ ಸಬ್ ಇನ್‌ಸ್ಪೆಕ್ಟರ್‌‌ ಮಂಜೇಗೌಡ ನೇತೃತ್ವದ ಪೊಲೀಸರ ತಂಡ ಕೆಸ್ತೂರು‌ ಬಳಿ ಆರೋಪಿಗಳನ್ನು ಬಂಧಿಸಲು ತೆರಳಿದ್ದರು.

ಈ ವೇಳೆ ಆರೋಪಿಗಳಾದ ಹೇಮಂತ್ ಮತ್ತು ಸೋನು ಎಂಬುವವರು ರಾಜಾನುಕುಂಟೆ ಸಬ್‌ ಇನ್‌ಸ್ಪೆಕ್ಟರ್‌ ಶಂಕರಪ್ಪ ಮತ್ತು ದೊಡ್ಡಬೆಳವಂಗಲ ಪೊಲೀಸ್ ಕಾನ್‌ಸ್ಟೇಬಲ್ ಹುಸೇನ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದಾಗ ರಾಘವ ಎಸ್.ಗೌಡ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡಿರುವ ಆರೋಪಿಗಳಿಗೆ ಹಾಗೂ ಪೊಲೀಸ್ ಸಿಬ್ಬಂದಿಗೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಆರೋಪಿಗಳು ಯಲಹಂಕದವರು ಎಂದು ತಿಳಿದು ಬಂದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.