ಶುಕ್ರವಾರ, ನವೆಂಬರ್ 15, 2019
22 °C

ಕೊಲೆಯತ್ನ ಆರೋಪಿಯ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಪೊಲೀಸರು

Published:
Updated:

ದೊಡ್ಡಬಳ್ಳಾಪುರ (ಬೆಂಗಳೂರು ಗ್ರಾಮಾಂತರ ಜಿಲ್ಲೆ): ಬಂಧಿಸಲು ಬಂದಿದ್ದ ಪೊಲೀಸ್ ಕಾನ್‌ಸ್ಟೆಬಲ್‌ಗೆ ಚಾಕುವಿನಿಂದ ಇರಿದ ಕೊಲೆ ಯತ್ನಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಗಾಯಗೊಂಡ ಆರೋಪಿಯನ್ನು ಬಂಧಿಸಿ, ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲಮಂಗಲ-ದೊಡ್ಡಬಳ್ಳಾಪುರ ರಸ್ತೆಯ ಆಲಹಳ್ಳಿ ಸಮೀಪ ಶನಿವಾರ ಮಧ್ಯರಾತ್ರಿ ಘಟನೆ ನಡೆದಿದೆ. ಶಿವಕುಮಾರ್ ಬಂಧಿತ ಆರೋಪಿ.

ದೊಡ್ಡಬಳ್ಳಾಪುರ ತಾಲ್ಲೂಕಿನ ಮಲ್ಲೋಹಳ್ಳಿ ಪಾಳ್ಯದ ಶಿವಕುಮಾರ್ ಭೂವಿವಾದ ಪ್ರಕರಣ ಒಂದರಲ್ಲಿ ಕಾಡನೂರು ಪಾಳ್ಯದ ಚಂದ್ರ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಲೆಮರೆಸಿಕೊಂಡಿದ್ದ. ಶಿವಕುಮರ್ ಕಾರೊಂದರಲ್ಲಿ ಸಂಚರಿಸುತ್ತಿದ್ದಾನೆ ಎಂಬ ಮಾಹಿತಿ ಅರಿತ ಗ್ರಾಮಾಂತರ ಪೊಲೀಸರು ಸಬ್‌ ಇನ್‌ಸ್ಪೆಕ್ಟರ್ ಗಜೇಂದ್ರ ನೇತೃತ್ವದಲ್ಲಿ ಬಂಧಿಸಲು ತಂತ್ರ ರೂಪಿಸಿದ್ದರು.

ಬಂಧಿಸಲು ಮುಂದಾದ ಹೆಡ್ ಕಾನ್‌ಸ್ಟೆಬಲ್ ರಾಧಾಕೃಷ್ಣ ಅವರ ಕೈಗೆ ಶಿವಕುಮಾರ್ ಚಾಕುವಿನಿಂದ ಇರಿದು ತಪ್ಪಿಸಿಕೊಳ್ಳಲು ಯತ್ನಿಸಿದ. ಆಗ ಸಬ್‌ ಇನ್‌ಸ್ಪೆಕ್ಟರ್ ಗಜೇಂದ್ರ ತಮ್ಮ ಸರ್ವಿಸ್ ಪಿಸ್ತೂಲ್‌ನಿಂದ ಆರೋಪಿಯ ಕಾಲಿಗೆ  ಗುಂಡು ಹಾರಿಸಿ ಕಾಲಿಗೆ ಗಾಯಗೊಳಿಸಿ ಬಂಧಿಸಿದ್ದಾರೆ. 

ಗಾಯಗೊಂಡಿರುವ ಆರೋಪಿಯನ್ನು ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಕು ಇರಿತಕ್ಕೆ ಒಳಗಾಗಿರುವ ರಾಧಾಕೃಷ್ಣ ಅವರಿಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿಯೊಬ್ಬ ಪೊಲೀಸರ ಮೇಲೆಯೇ ಹಲ್ಲೆ ನಡೆಸಲು ಮುಂದಾಗಿರುವ ಹಾಗೂ ಆರೋಪಿಯೊಬ್ಬನ ಮೇಲೆ ಪೊಲೀಸರು ಗುಂಡುಹಾರಿಸಿರುವ ಪ್ರಕರಣ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಇದೇ ಮೊದಲು.


ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಸಬ್‌ ಇನ್‌ಸ್ಪೆಕ್ಟರ್ ಗಜೇಂದ್ರ

 

ಪ್ರತಿಕ್ರಿಯಿಸಿ (+)