ಪ್ರಜಾವಾಣಿ ವಾರ್ತೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಬೈರಸಂದ್ರ ಗ್ರಾಮದಲ್ಲಿನ ಹಂದಿ ಶೆಡ್ನಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಲಿ ಅಧಿಕಾರಿಗಳು ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ತಾಲ್ಲೂಕಿನ ದೊಡ್ಡ ತುಮಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಸಂದ್ರದಲ್ಲಿ ಹಂದಿ ಸಾಕಾಣಿಕೆ ಶೆಡ್ ಅನ್ನು ಅಕ್ರಮವಾಗಿ ನಿರ್ಮಿಸಲಾಗಿದೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗುತ್ತಿದೆ. ಕೂಡಲೇ ಶೆಡ್ ಮಾಲೀಕರ ವಿರುದ್ಧ ಕ್ರಮ ಜರುಗಿಸಬೇಕು. ಜೊತೆಗೆ ಹಂದಿ ಶೆಡ್ ಅನ್ನು ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದರು.

ತಹಶೀಲ್ದಾರ್ ಮಲ್ಲಪ್ಪ. ಕೆ.ಯರಗೋಳ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಹರ್ತಿ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ಮಾಲಿನ್ಯ ನಿಯಂತ್ರಣ ಮಂಡಲಿ ಪರಿಶೀಲಿಸಿ, ವರದಿ ನೀಡಲಿದೆ. ಈ ವರದಿ ಅನ್ವಯ ಮಾಲೀಕರ ವಿರುದ್ಧ ಜಿಲ್ಲಾಡಳಿತ ಕ್ರಮ ಜರುಗಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿ ಶಿವಕುಮಾರ್ ನೇತೃತ್ವದ ತಂಡ ಸ್ವಚ್ಛತೆ ಕಾಪಾಡದೆ ಹಂದಿ ಸಾಕಣೆ ಮಾಡುತ್ತಿರುವ ಹಂದಿ ಶೆಡ್ ಮಾಲೀಕರನ್ನು ತರಾಟೆಗೆ ತೆಗೆದುಕೊಂಡಿತು.

ಹಂದಿ ಶೆಡ್ನಿಂದ ಮಾಲಿನ್ಯವಾಗುತ್ತಿರುವ ಮತ್ತು ಇಲ್ಲಿನ ಸಮಸ್ಯೆ ಪರಿಶೀಲಿಸಿ, ವರದಿ ಸಲ್ಲಿಸುವಂತೆ ಹೈಕೋರ್ಟ್ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಲಾಗಿದೆ. ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಮಾಲಿನ್ಯ ನಿಯಂತ್ರಣ ಮಂಡಲಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.