ದೇವನಹಳ್ಳಿ: ತಾಲ್ಲೂಕಿನ ಕನ್ನಮಂಗಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಫಿಜಾ ಗ್ಲೋಬಲ್ ಆಗ್ರೋ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿದೆ.

ಕಳೆದ ಜನವರಿ 14ರಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಹೊಸಕೋಟೆ ಪ್ರಾದೇಶಿಕ ಕಚೇರಿ ಅಧಿಕಾರಿಗಳು ಪರಿಶೀಲನೆ ನಡೆಸಿದ ವೇಳೆ, ತರಕಾರಿ ತೊಳೆಯುವ ಮಲಿನ ನೀರನ್ನು ಶುದ್ಧೀಕರಣ ಮಾಡದೆ ಆವರಣದ ತಗ್ಗು ಪ್ರದೇಶಗಳಿಗೆ ಬಿಡಲಾಗುತ್ತಿರುವುದು, ಕೈಗಾರಿಕಾ ತ್ಯಾಜ್ಯ ನೀರನ್ನು ಪರಿಸರಕ್ಕೆ ಬಿಡುವ ಮೊದಲು ಸಂಸ್ಕರಿಸಲು ಇರುವ ಇಟಿಪಿ ವ್ಯವಸ್ಥೆ ಮಾಡದೆ ಇರುವುದು ಗಮನಕ್ಕೆ ಬಂದಿದೆ.

ಇದೇ ವೇಳೆ ಸಂಸ್ಥೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪಡೆಯಬೇಕಾದ ಅನುಮತಿ ಕೂಡ ಪಡೆದಿಲ್ಲ ಎಂಬುದು ಪರಿಶೀಲನೆಯಲ್ಲಿ ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಜಲ ಮತ್ತು ವಾಯು ಮಾಲಿನ್ಯ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಘಟಕದ ಕಾರ್ಯಾಚರಣೆ ಸ್ಥಗಿತ ಹಾಗೂ ವಿದ್ಯುತ್ ಸಂಪರ್ಕ ಕಡಿತಕ್ಕೆ ಮಂಡಳಿ ಪ್ರಸ್ತಾವಿತ ಕ್ರಮ ಕೈಗೊಂಡಿದೆ.

ಏಳು ದಿನಗಳೊಳಗೆ ಕಾರಣ ಸೂಚಿಸಿ ಉತ್ತರ ನೀಡುವಂತೆ ಸಂಸ್ಥೆಗೆ ನೋಟಿಸ್ ನೀಡಲಾಗಿದೆ. ಸಮರ್ಪಕ ಉತ್ತರ ದೊರೆಯದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಂಡಳಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.