ದೇವನಹಳ್ಳಿ: ಹೆಚ್ಚುತ್ತಿರುವ ಜನಸಂಖ್ಯೆ ನಿಯಂತ್ರಿಸುವ ಸಲುವಾಗಿ ಅರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್ ತಿಳಿಸಿದರು.

ಪಟ್ಟಣದ ಬಿಬಿ ರಸ್ತೆಯಲ್ಲಿರುವ ತಾಲ್ಲೂಕು ಆರೋಗ್ಯ ಅಧಿಕಾರಿ ಕಚೇರಿಯಲ್ಲಿ ಜಿಲ್ಲಾಡಳಿತ, ಜಿ.ಪಂ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಸೋಮವಾರ ಉದ್ಘಾಟಿಸಿ ಮಾತನಾಡಿದರು.

1945ರಲ್ಲಿ ಮೈಸೂರು ಸಂಸ್ಥಾನದ ಮಹರಾಜರು ಕುಟುಂಬ ಯೋಜನೆ ಜಾರಿಗೆ ತಂದಿದ್ದರು. ಜನಸಂಖ್ಯೆ ಬೆಳವಣಿಗೆಯಲ್ಲಿ ಸುಧಾರಣೆ ಕಾಣಬಹುದಾಗಿದೆ. ಪ್ರಕೃತಿ ಸಂಪನ್ಮೂಲ ಸಮರ್ಪಕ ಬಳಕೆಗೆ ಜನಸಂಖ್ಯೆ ನಿಯಂತ್ರಿಸುವುದೇ ಏಕ ಮಾತ್ರ ಮಾರ್ಗ ಎಂದು ತಿಳಿಸಿದರು.

ಜನಸಂಖ್ಯೆ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಜನಸಂಖ್ಯೆ ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.

ಬಡತನ, ಅಜ್ಞಾನ, ಬಾಲ್ಯವಿವಾಹ, ಮಾಹಿತಿ ಕೊರತೆ ಪ್ರಮಾಣದಿಂದ ಜನಸಂಖ್ಯೆ ಹೆಚ್ಚಾಗುತ್ತಿದೆ. ಜನಸಂಖ್ಯೆ ಹೆಚ್ಚಳದಿಂದ ಶಿಕ್ಷಣ, ಆರೋಗ್ಯ ಸೇವೆ ಮತ್ತು ಇತರೆ ಸಂಪನ್ಮೂಲ ಸೇವೆಗಳಿಗೆ ಕೊರತೆ ಉಂಟಾಗಲಿದೆ. ಜನಸಂಖ್ಯೆ ಸ್ಥಿರತೆಯಿಂದ ದೇಶದ ಪ್ರಗತಿ ಸಾಧ್ಯವಾಗಿದ್ದು ಕಲ್ಯಾಣ ವಿಧಾನ ಪ್ರತಿಯೊಬ್ಬರೂ ಅನುಸರಿಸಬೇಕು ಎಂದರು.

ಹಿರಿಯ ಆರೋಗ್ಯ ನಿರೀಕ್ಷಕ ವೆಂಕಟೇಶ ಮಾತನಾಡಿ, ಜನಸಂಖ್ಯಾ ನಿಯಂತ್ರಣ ಮಾಹಿತಿ ಸರ್ಕಾರಿ ಆಸ್ಪತ್ರೆಯಲ್ಲಿ ಸಂಪೂರ್ಣ ಉಚಿತವಾಗಿ ಸಿಗಲಿದೆ ಎಂದು ತಿಳಿಸಿದರು.

ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿ ಶಶಿಕಲಾ, ವೈದ್ಯಾಧಿಕಾರಿಗಳು, ತಾಲ್ಲೂಕು ಆರೋಗ್ಯ ಕಚೇರಿ ಸಿಬ್ಬಂದಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.