ಯುವಕರ ದಾರಿ, ಗಂಭೀರ ಚಿಂತನೆ ಅಗತ್ಯ

7
ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು ವಿದ್ಯಾರ್ಥಿ ವೇತನ ವಿತರಣೆ

ಯುವಕರ ದಾರಿ, ಗಂಭೀರ ಚಿಂತನೆ ಅಗತ್ಯ

Published:
Updated:
Deccan Herald

 ದೊಡ್ಡಬಳ್ಳಾಪುರ: ‘ಸಮಾಜಕ್ಕೆ ಮಾದರಿಯಾಗಿರಬೇಕಿರುವ ಸ್ವಾಮೀಜಿಗಳು, ಆದರ್ಶ ಪುರುಷ, ಮಹಿಳೆಯರು ಎನಿಸಿಕೊಂಡವರೇ ಹಾದಿ ತಪ್ಪುತ್ತಿರುವಾಗ ನಾವು ಯಾರನ್ನು ನಂಬಬೇಕು ಎನ್ನುವ ಜಿಜ್ಞಾಸೆ ಮೂಡುತ್ತಿದೆ. ಗಾಂಧಿ, ವಿವೇಕಾನಂದರಂತಹ ಮಹಾನ್ ಪುರುಷರನ್ನು ಮರೆಯುತ್ತಿರುವ ಪರಿಣಾಮ ಇಂದಿನ ಯುವ ಜನಾಂಗ ಹಾದಿ ತಪ್ಪುತ್ತಿದೆ’ ಎಂದು ಕಾಂಗ್ರೆಸ್‌ ಹಿರಿಯ ನಾಯಕಿ ರಾಣಿ ಸತೀಶ್ ಹೇಳಿದರು.

ಪಿಸಿವಿ ಚಾರಿಟಬಲ್ ಟ್ರಸ್ಟ್‌ನ ವತಿಯಿಂದ ನಗರದ ಡಿ.ಪಿ.ವಿ. ಕಲ್ಯಾಣ ಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರ, ಸನ್ಮಾನ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದಿನ ಆಧುನಿಕ ಯುಗದಲ್ಲಿ ಯುವಜನತೆ ಅನೇಕ ವ್ಯಸನಗಳಿಗೆ ಬಲಿಯಾಗುತ್ತಿದ್ದು, ಯುವ ಜನತೆ ಎತ್ತ ಸಾಗುತ್ತಿದೆ ಎನ್ನುವ ಗಂಭೀರ ಚಿಂತನೆ ಅಗತ್ಯವಾಗಿದೆ ಎಂದರು.‌

ಕೇಂದ್ರ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಕೆ.ಎಂ. ಹನುಮಂತರಾಯಪ್ಪ ಮಾತನಾಡಿ, ಟ್ರಸ್ಟ್ ಶೈಕ್ಷಣಿಕ ಪ್ರತಿಭೆಗಳ ಉತ್ತೇಜನಕ್ಕೆ ಮಾಡುತ್ತಿರುವ ಕಾರ್ಯ ಮತ್ತು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯ ಎಂದರು. ರೇಷ್ಮೆ ಇಲಾಖೆಯಲ್ಲಿನ ಯೋಜನೆ ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ನಗರಸಭೆ ಅಧ್ಯಕ್ಷ ಟಿ.ಎನ್. ಪ್ರಭುದೇವ್ ಮಾತನಾಡಿ, ದಶಕಗಳ ಹಿಂದೆ ಶಿಕ್ಷಣಕ್ಕೆ ಆದ್ಯತೆ ನೀಡದೇ ಇದ್ದ ನೇಕಾರ ಸಮುದಾಯ ಇಂದು ಶಿಕ್ಷಣದಲ್ಲಿ ಪ್ರಗತಿ ಕಾಣುತ್ತಿರುವುದು ಉತ್ತಮ ಬೆಳವಣಿಗೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಗ್ರಾಮೀಣ ವಿದ್ಯಾರ್ಥಿಗಳು ಸಹ ಸ್ಪರ್ಧೆ ಎದುರಿಸಬೇಕಾದ ಅನಿವಾಯತೆ ಇದೆ. ಈ ನಿಟ್ಟಿನಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಾಗಬೇಕಿದೆ’ ಎಂದರು.

ಪುಷ್ಪಾಂಡಜ ಆಶ್ರಮದ ದಿವ್ಯಜ್ಞಾನಾನಂದ ಗಿರಿ ಸ್ವಾಮೀಜಿ ಸಾನ್ನಿಧ್ಯ ವಹಿಸಿ ಪ್ರತಿಭಾ ಪುರಸ್ಕಾರ ನೀಡಿದರು. ಟ್ರಸ್ಟ್‌ನ ಅಧ್ಯಕ್ಷ ಪಿ.ಸಿ. ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ವಾಣಿಜ್ಯೋದ್ಯಮಿ ಎಚ್.ಪಿ. ಶಂಕರ್, ನಗರಸಭಾ ಸದಸ್ಯ ಪಿ.ಸಿ. ಲಕ್ಷ್ಮೀನಾರಾಯಣ್, ದೇವಾಂಗ ಮಂಡಲಿ ಪ್ರಭಾರಿ ಅಧ್ಯಕ್ಷ ಕೆ.ಜಿ. ದಿನೇಶ್, ಮಾಜಿ ಅಧ್ಯಕ್ಷ ವಿ.ತಿಮ್ಮಶೆಟ್ಟಪ್ಪ, ಟ್ರಸ್ಟ್‌ನ ಕಾರ್ಯದರ್ಶಿ ಪಿ.ವಿ. ಪ್ರಶಾಂತ್, ಖಜಾಂಚಿ ಪುಷ್ಪಲತಾ, ಟ್ರಸ್ಟಿಗಳಾದ ಡಾ.ಚಂದನ, ಅನುಶ್ರೀ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !