ದೊಡ್ಡಬಳ್ಳಾಪುರ: ರಾಜ್ಯ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಚುನಾವಣಾ ಪೂರ್ವ ಹಾಗೂ ಮತದಾನದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ಷೇತ್ರದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಸಲು ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪೊಲೀಸ್ ಪಡೆ ಬುಧವಾರ ನಗರದ ಪ್ರಮುಖ ರಸ್ತೆಗಳಲ್ಲಿ ತಾಲೀಮು ನಡೆಸಿತು.
ಈ ಬಗ್ಗೆ ಮಾತನಾಡಿದ ಡಿವೈಎಸ್‌ಪಿ ನಾಗರಾಜ್, ದೊಡ್ಡಬಳ್ಳಾಪುರದ ಡಿವೈಎಸ್‌ಪಿ ವಿಭಾಗದಲ್ಲಿ ಇಂದಿನಿಂದ ಚುನಾವಣೆ ಮುಕ್ತಾಯವಾಗುವವರೆಗೆ ಕೇಂದ್ರೀಯ ಕ್ಷಿಪ್ರ ಕಾರ್ಯಾಚರಣೆ ಪೊಲೀಸ್ ಪಡೆಯ 120 ಮಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಮತದಾನದ ದಿನಾಂಕ ಸಮೀಪಿಸುತ್ತಿದ್ದಂತೆ ಬಿಎಸ್‌ಎಫ್ ಸಿಬ್ಬಂದಿಯ ಒಂದು ತುಕಡಿಯು ಸಹ ಇಲ್ಲಿಗೆ ಬರಲಿದೆ. ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳಲ್ಲಿ ಸ್ಥಳೀಯ ಪೊಲೀಸರೊಂದಿಗೆ ಈ ಸಿಬ್ಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಶಾಂತಿಯುತ ಮತದಾನಕ್ಕೆ ಅಗತ್ಯ ಇರುವ ಎಲ್ಲ ರೀತಿಯ ಸಿದ್ಧತೆಯನ್ನು ಪೊಲೀಸ್ ಇಲಾಖೆ ಮಾಡಿಕೊಂಡಿದೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಶೆಟ್ಟಿಹಳ್ಳಿಯಲ್ಲೂ ಸ್ಥಳೀಯ ಪೊಲೀಸ್ ಸಿಬ್ಬಂದಿ ಜೊತೆಗೂಡಿ ಪಥ ಸಂಚಲನ ನಡೆಸುವ ಮೂಲಕ ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡಲಾಗಿದೆ ಎಂದರು.
ಈ ವೇಳೆ ಇನ್‌ಸ್ಪೆಕ್ಟರ್ ಹರೀಶ್‌ಕುಮಾರ್, ಪ್ರೀತಂ ಶ್ರೇಯಕರ್ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.