ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರದಲ್ಲಿ ಪ್ರಜಾ ಧ್ವನಿ ಸಮಾವೇಶದ ಪೂರ್ವಭಾವಿ ಸಭೆ

ವಿಜಯಪುರದಲ್ಲಿ ಪ್ರಜಾ ಧ್ವನಿ ಸಮಾವೇಶದ ಪೂರ್ವಭಾವಿ ಸಭೆ
Last Updated 1 ಫೆಬ್ರುವರಿ 2023, 5:04 IST
ಅಕ್ಷರ ಗಾತ್ರ

ವಿಜಯಪುರ(ದೇವನಹಳ್ಳಿ): ಪಟ್ಟಣದ ಜೂನಿಯರ್ ಕಾಲೇಜಿನ ಮೈದಾನದಲ್ಲಿ ಫೆಬ್ರುವರಿ 4ರಂದು ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶದ ಹಿನ್ನೆಲೆಯಲ್ಲಿ ಮಂಗಳವಾರ ಪ್ರವಾಸಿ ಮಂದಿರದ ಆವರಣದಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ವಿಜಯಪುರ ಹೋಬಳಿ, ಚನ್ನರಾಯಪಟ್ಟಣ ಹೋಬಳಿಯ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ಮಾತನಾಡಿ, ಕ್ಷೇತ್ರದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ಪಕ್ಷ ಸಂಘಟನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನಾವು ನೀಡುತ್ತೇವೆ. ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಸಮಾವೇಶವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಆರ್. ಗೌಡ ಮಾತನಾಡಿ, ‘ಪಕ್ಷದಲ್ಲಿನ ಭಿನ್ನಮತ ಮರೆತು, ಈ ಬಾರಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ನಾವೆಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ತಾಲ್ಲೂಕಿನಲ್ಲಿ 50 ಸಾವಿರಕ್ಕೂ ಹೆಚ್ಚು ಮಂದಿ ಸದಸ್ಯತ್ವ ನೋಂದಣಿ ಮಾಡಿಸಿಕೊಂಡಿದ್ದು, ಸಮಾವೇಶದಲ್ಲಿ ಕನಿಷ್ಠ 20 ಸಾವಿರಕ್ಕೂ
ಹೆಚ್ಚು ಮಂದಿ ಸೇರಿಸಬೇಕು’ ಎಂದು ಹೇಳಿದರು.

ಮಾಜಿ ಶಾಸಕ ಮುನಿನರಸಿಂಹಯ್ಯ ಮಾತನಾಡಿ, ಕ್ಷೇತ್ರದಲ್ಲಿ ಸಮಾವೇಶ ಯಶಸ್ವಿಯಾಗಬೇಕಾದರೆ, ಪಕ್ಷದ ಮುಖಂಡರು, ಕಾರ್ಯಕರ್ತರು, ಬದ್ಧತೆಯಿಂದ ಕೆಲಸ ಮಾಡಬೇಕು ಎಂದರು.

ಮಾಜಿ ಶಾಸಕ ಕೆ. ವೆಂಕಟಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ವಿ. ಮಂಜುನಾಥ್, ವಿ. ಶಾಂತಕುಮಾರ್, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಲಕ್ಷ್ಮಿನಾರಾಯಣಪ್ಪ, ಟೌನ್ ಕಾಂಗ್ರೆಸ್ ಅಧ್ಯಕ್ಷ ವಿ.ಎಂ. ನಾಗರಾಜ್, ಪುರಸಭಾ ಸದಸ್ಯರಾದ ಎಂ. ಸತೀಶ್ ಕುಮಾರ್, ವಿ. ನಂದಕುಮಾರ್, ಗೌಸ್ ಖಾನ್, ಮಾಜಿ ವಿಎಸ್ಎಸ್ಎನ್ ಅಧ್ಯಕ್ಷ ಎಂ. ವೀರಣ್ಣ ಮಾತನಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ. ರಾಮಚಂದ್ರಪ್ಪ, ಪ್ರಸನ್ನಕುಮಾರ್, ಟೌನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಮಂಜುನಾಥ್, ಹಿಂದುಳಿದ ವರ್ಗಗಳ ರಾಜ್ಯ ಮುಖಂಡ ಜಗನ್ನಾಥ್, ಸಂಪತ್ ಕುಮಾರ್, ಕೆ.ಎಂ. ಮಧು(ಮಹೇಶ್), ದಿನ್ನೂರು ವೆಂಕಟೇಶ್, ಕೆ. ಲಕ್ಷ್ಮಣಗೌಡ, ಕೆ.ಆರ್. ನಾಗೇಶ್, ವಿರೂಪಾಕ್ಷಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಅನಂತಕುಮಾರಿ, ರಾಧಮ್ಮ, ಮಾಧವಿ, ಪುರಸಭಾ ಸದಸ್ಯರಾದ ಹನೀಪುಲ್ಲಾ, ಎಂ. ರಾಜಣ್ಣ, ಎಂ. ನಾರಾಯಣಸ್ವಾಮಿ, ಸದಾಶಿವರೆಡ್ಡಿ, ಸಜ್ಜದ್, ಜಿ. ರಾಜಗೋಪಾಲ್, ಮುಖೇಶ್ ಬಾಬು, ಶೆಟ್ಟಿಗೆರೆ ರಾಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT