ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ವಂತ ಬಲದಲ್ಲಿ ಜೆಡಿಎಸ್ಅನ್ನು ಅಧಿಕಾರಕ್ಕೆ ತರುವುದು ಗುರಿ: ಎಚ್.ಡಿ.ಕುಮಾರಸ್ವಾಮಿ

Last Updated 29 ನವೆಂಬರ್ 2021, 4:34 IST
ಅಕ್ಷರ ಗಾತ್ರ

ವಿಜಯಪುರ:‘ಜೆಡಿಎಸ್ ಪಕ್ಷವನ್ನು ಸ್ವಂತ ಬಲದ ಮೇಲೆ ಅಧಿಕಾರಕ್ಕೆ ತಂದುನಾಡಿನ 6.5 ಕೋಟಿ ಕುಟುಂಬಗಳು ನೆಮ್ಮದಿಯಿಂದ ಬದುಕುವಂತೆ ಮಾಡುವುದೇ ನನ್ನ ಮೂಲ ಗುರಿಯಾಗಿದೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಚನ್ನರಾಯಪಟ್ಟಣ ಹೋಬಳಿಯ ಬೂದಿಗೆರೆ ಗ್ರಾಮದ ದೇಶನಾರಾಯಣಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ನಡೆದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

ಜನರನ್ನು ತಪ್ಪುದಾರಿಗೆ ಎಳೆಯಲು ಹೋಗುವುದಿಲ್ಲ. ನಮ್ಮ ಉದ್ದೇಶಕ್ಕೆ ಜನರ ಆಶೀರ್ವಾದ ಬೇಕಾಗಿದೆ. ರೈತರ, ದೀನ ದಲಿತರ ಸಂಕಷ್ಟ ಬಗೆಹರಿಸುವಂತಹ ಪಕ್ಷವನ್ನು ಆಯ್ಕೆ ಮಾಡಬೇಕು ಎಂದು ಕೋರಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಈ ಕ್ಷೇತ್ರದ ಮಗನಾಗಿ ಎಲ್ಲರ ವಿಶ್ವಾಸ ಗಳಿಸಿಕೊಂಡು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಲಕ್ಷಾಂತರ ಎಕರೆಯಲ್ಲಿ ಬೆಳೆ ನಾಶವಾಗಿದೆ. ಸರ್ಕಾರ ರೈತರ ಬದುಕನ್ನು ಕಟ್ಟಿಕೊಡಬೇಕಾಗಿದೆ. ಜನರ ನಿರೀಕ್ಷೆ ತಲುಪಲು ಸರ್ಕಾರದಿಂದ ಸಾಧ್ಯವಾಗಿಲ್ಲ ಎಂದರು.

ದ್ರಾಕ್ಷಿ, ರಾಗಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೀದಿಬದಿ ವ್ಯಾಪಾರಿಗಳಿಗೂ ತೊಂದರೆಯಾಗಿದೆ. ಇವರೆಲ್ಲರ ನೆರವಿಗೆ ಬರಬೇಕಾಗಿರುವುದು ಸರ್ಕಾರದ ಜವಾಬ್ದಾರಿ. ರಾಜ್ಯದಲ್ಲಿ ಹೃದಯ ವೈಶಾಲ್ಯತೆಯಿಂದ ಕೆಲಸ ಮಾಡುವವರಿಲ್ಲ. ನಮ್ಮ ಪಕ್ಷದಿಂದ ಪಂಚರತ್ನ ಕಾರ್ಯಕ್ರಮಗಳನ್ನು ಜಾರಿಗೆ ತರುತ್ತೇವೆ. ಪ್ರತಿ ಕುಟುಂಬಕ್ಕೆ ಉಚಿತ ಶಿಕ್ಷಣ, ಆರೋಗ್ಯ, ಉದ್ಯೋಗ ಕಲ್ಪಿಸುವಂತಹ ಕಾರ್ಯಕ್ರಮಗಳು ಮಾಡಲಿದ್ದೇವೆ ಎಂದು ಭರವಸೆ ನೀಡಿದರು.

ಮುಖಂಡರು ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ದೇವನಹಳ್ಳಿ ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದೆ. ಇದರ ಹಿಂದೆ ಲಕ್ಷಾಂತರ ಕಾರ್ಯಕರ್ತರ ಶ್ರಮವಿದೆ. ಕಾರ್ಯಕರ್ತರ ಶ್ರಮಕ್ಕೆ ಎಂದಿಗೂ ದ್ರೋಹ ಬಗೆಯುವುದಿಲ್ಲ ಎಂದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದಿಂದ ಜನತೆಗೆ ಯಾವುದೇ ಉಪಯೋಗವಿಲ್ಲದಂತಾಗಿದೆ ಎಂದು ಟೀಕಿಸಿದರು.

‘ಬಡವರು, ದೀನದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಜಾತಿ, ವರ್ಗದ ಜನರ ಏಳಿಗೆಗಾಗಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಬೇಕಾಗಿದೆ. ನನ್ನನ್ನು ಈ ಕ್ಷೇತ್ರದ ಶಾಸಕನಾಗಿ ಆಯ್ಕೆ ಮಾಡಿದ ದಿನದಿಂದಲೂ ಜಾತಿ, ಮತ, ಪಕ್ಷಭೇದ ಮರೆತು ಎಲ್ಲಾ ಹಳ್ಳಿಗಳ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದೇನೆ’ ಎಂದು ಹೇಳಿದರು.

ನಮ್ಮ ಅಭಿವೃದ್ಧಿ ಕೆಲಸಗಳನ್ನು ಮೆಚ್ಚಿ ಅನ್ಯಪಕ್ಷಗಳನ್ನು ಬಿಟ್ಟು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಪಕ್ಷದ ಬೇರುಗಳು ಗಟ್ಟಿಯಾಗಿವೆ. ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 123ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಮೂಲಕ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದರು.

ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ರಮೇಶ್ ಗೌಡ, ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಆರ್. ಮುನೇಗೌಡ, ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ. ರವೀಂದ್ರ, ಕಲ್ಯಾಣ್ ಕುಮಾರ್ ಬಾಬು, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT