ಆಸ್ಪತ್ರೆಗೆ ಬರುವ ಮುನ್ನ ಮೃತ ಗರ್ಭಿಣಿ ಸುಶ್ಮಿತ ಆಸ್ಪತ್ರೆಗೆ ಬರುವ ಮುನ್ನವೇ ಮೃತಪಟ್ಟಿದ್ದರು ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ. ಆದರೆ ಪೋಷಕರು ಆಸ್ಪತ್ರೆಯಲ್ಲಿ ಮೃತ ಪಟ್ಟಿರುವುದಾಗಿ ಹೇಳುತ್ತಿದ್ದಾರೆ. ಗರ್ಭಿಣಿಯರ ಸಾವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆ ನಡೆಸಬೇಕು ಎನ್ನುವ ಆದೇಶವನ್ನು ಸರ್ಕಾರ ನೀಡಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ತನಿಖೆ ನಡೆಸಿ ವೈದ್ಯರ ನಿರ್ಲಕ್ಷ್ಯ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.ಡಾ.ಲಕ್ಕ ಕೃಷ್ಣಾರೆಡ್ಡಿ ಜಿಲ್ಲಾ ಆರೋಗ್ಯ ಅಧಿಕಾರಿ. ಕೋಟ್–2 ವೈದ್ಯರ ನಿರ್ಲಕ್ಷ್ಯದಿಂದ ಸುಶ್ಮಿತ ಮೃತಪಟ್ಟಿರುವುದಾಗಿ ಅವರ ತಾಯಿ ಭಾಗ್ಯಮ್ಮ ದೂರು ನೀಡಿದ್ದಾರೆ. ಅನುಮಾನಸ್ಪದ ಸಾವಿನ ಪ್ರಕರಣ ಎಂದು ದೂರು ದಾಖಲಿಸಿಕೊಳ್ಳಲಾಗಿದೆ. ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾ ದೃಶ್ಯ ಹಾಗೂ ವೈದ್ಯರ ಚಿಕಿತ್ಸೆ ವಿವರ ಪಡೆದು ತನಿಖೆ ನಡೆಸಲಾಗುವುದು.
-ಅಮರೇಶ್‌ಗೌಡ ಇನ್‌ಸ್ಪೆಕ್ಟರ್ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ