ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ 

7
ಅಧಿಕಾರಿಗಳಿಗೆ ಸಂಸದ ಎಂ.ವೀರಪ್ಪ ಮೊಯಿಲಿ ಸಲಹೆ

ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ 

Published:
Updated:
Deccan Herald

ದೇವನಹಳ್ಳಿ: ಪುರಸಭೆ ಸಮಗ್ರ ಅಭಿವೃದ್ಧಿಗೆ ಮಾಸ್ಟರ್‌ ಪ್ಲಾನ್ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಂಸದ ಎಂ.ವೀರಪ್ಪ ಮೊಯಿಲಿ ಸಲಹೆ ನೀಡಿದರು.

ಇಲ್ಲಿನ ಪುರಸಭೆ ಆವರಣದಲ್ಲಿ ಮಂಗಳವಾರ 2016–17ನೇ ಸಾಲಿನ ಮುಖ್ಯಮಂತ್ರಿ ಸಣ್ಣ ಮತ್ತು ಮಧ್ಯಮ ಪಟ್ಟಣಗಳ ಅಭಿವೃದ್ಧಿ ಕಾರ್ಯಕ್ರಮದ 3ನೇ ಹಂತದ ನಗರೋತ್ಥಾನ ಯೋಜನೆಯ ₹4 ಕೋಟಿ 14 ಲಕ್ಷ 95 ಸಾವಿರ ಮೊತ್ತ ವಿವಿಧ ಅಭಿವೃದ್ಧಿ ಕಾಮಗಾರಿ ಶಂಕು ಸ್ಥಾಪನೆ ಮತ್ತು ಪೂರ್ಣಗೊಂಡಿರುವ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಜಿಲ್ಲಾಡಳಿತ ಕಚೇರಿ ಸಂಕೀರ್ಣ ಕಾಮಗಾರಿ ಮುಗಿದು ಪೂರ್ಣಗೊಂಡಿದೆ. ಸಣ್ಣಪುಟ್ಟ ಕಾಮಗಾರಿ ಕೆಲಸ ನಡೆಯುತ್ತಿದೆ. ಇನ್ನೆರಡು ತಿಂಗಳಲ್ಲಿ ಬೆಂಗಳೂರು ನಗರ ಕೇಂದ್ರದಲ್ಲಿರುವ ಗ್ರಾಮಾಂತರ ಜಿಲ್ಲಾ ಮಟ್ಟದ ಎಲ್ಲ ಇಲಾಖೆಗಳು ಸ್ಥಳಾಂತರಗೊಳ್ಳಲಿದೆ ಎಂದರು.

ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಉತ್ತಮ ಅಭಿವೃದ್ಧಿ ಕೆಲಸ ನಿರೀಕ್ಷೆಯಂತೆ ನಡೆಯುತ್ತಿದೆ. ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಒತ್ತು ನೀಡಬೇಕಾಗಿದೆ ಎಂದು ತಿಳಿಸಿದರು.

ಮೊದಲು ಅರ್ಹರಿಗೆ ಗುಂಪು ಮನೆಗಳ ನಿರ್ಮಾಣ ಮಾಡಬೇಕು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಹೊಂದಾಣಿಕೆ ಮಾಡಿಕೊಳ್ಳಲಿದೆ ಎಂದು ಮಾಹಿತಿ ನೀಡಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಪುರಸಭೆ ಅಸ್ತಿತ್ವಕ್ಕೆ ಬಂದು ಅನೇಕ ವರ್ಷಗಳಾದರೂ ಒಳ ಚರಂಡಿ ವ್ಯವಸ್ಥೆಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ವಿಜಯಪುರ ಪುರಸಭೆ ವ್ಯಾಪ್ತಿಯಲ್ಲಿ ಅಪೂರ್ಣಗೊಂಡಿರುವ ಒಳ ಚರಂಡಿ ಅವ್ಯವಸ್ಥೆಯಿಂದ ಮಳೆಗಾಲದಲ್ಲಿ ಸ್ಥಳೀಯರಿಗೆ ತೊಂದರೆಯಾಗುತ್ತಿದ್ದು, ಗುಂಡಿ ಮುಚ್ಚುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಪುರಸಭೆ ಅಧ್ಯಕ್ಷ ಎಂ.ಮೂರ್ತಿ ಮಾತನಾಡಿ, ದೇವನಹಳ್ಳಿ ಪುರಸಭೆ ವ್ಯಾಪ್ತಿಯಲ್ಲಿರುವ ಎರಡು ರಸ್ತೆಗಳು ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿವೆ. ಪುರಸಭೆಗೆ ಇದುವರೆಗೂ ಅಧಿಕೃತವಾಗಿ ಹತ್ತಾಂತರ ಮಾಡಿಲ್ಲ ಎಂದರು.

ಮಾಜಿ ಶಾಸಕ ವೆಂಕಟಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮಿನಾರಾಯಣ, ಪುರಸಭೆ ಉಪಾಧ್ಯಕ್ಷೆ ಆಶಾರಾಣಿ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಸದಸ್ಯರಾದ ರವೀಂದ್ರ, ಶಶಿಕುಮಾರ, ಎಂ.ಕುಮಾರ್, ಗೋಪಾಲ್, ಪದ್ಮಾವತಿ ಜಗನ್ನಾಥ್, ಎನ್.ರಘು, ಶಾರದಮ್ಮ, ರತ್ನಮ್ಮ ,ಗಾಯಿತ್ರಿ, ಪುಪ್ಪ ರವಿಕುಮಾರ್, ಶಾಂತಮ್ಮ , ಎಂ.ನಾರಾಯಣಸ್ವಾಮಿ, ನರಸಿಂಹಮೂರ್ತಿ, ಮುಖ್ಯಾಧಿಕಾರಿ ಅಂಬಿಕಾ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !