ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿಯುತ ಮತದಾನಕ್ಕೆ ಸಿದ್ಧತೆ

ಹೊಸಕೋಟೆಯಲ್ಲಿ ಚುನಾವಣಾಧಿಕಾರಿ ನಾಗರಾಜ್ ಹೇಳಿಕೆ
Last Updated 22 ನವೆಂಬರ್ 2019, 14:36 IST
ಅಕ್ಷರ ಗಾತ್ರ

ಹೊಸಕೋಟೆ: ತಾಲ್ಲೂಕಿನಲ್ಲಿ ಡಿಸೆಂಬರ್ 5 ರಂದು ನಡೆಯಲಿರುವ ವಿಧಾನ ಸಭಾ ಉಪ ಚುನಾವಣೆ ನಿರ್ಭೀತ ಹಾಗು ಮುಕ್ತವಾಗಿ ನಡೆಯಲು ಸಕಲ ಸಿದ್ದತೆ ಮಾಡಿಕೊಂಡಿರುವುದಾಗಿ ಚುನಾವಣಾಧಿಕಾರಿ ಎಚ್.ಎಲ್. ನಾಗರಾಜ್ ತಿಳಿಸಿದರು.

ಅವರು ತಾಲ್ಲೂಕು ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. ತಾಲ್ಲೂಕಿನಲ್ಲಿ 286 ಮತಗಟ್ಟೆಗಳಿದ್ದು ಅದರಲ್ಲಿ 85 ಅತಿಸೂಕ್ಷ್ಮ ಹಾಗೂ 69 ಸೂಕ್ಷ್ಮ ಮತಗಟ್ಟೆಗಳಿವೆ. ಅಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಭ್ಯರ್ಥಿಗಳ ಚುನಾವಣಾ ವೆಚ್ಚವು ಮಿತಿ ಕುರಿತು ನಿಗಾವಹಿಸಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಚುನಾವಣಾ ವೆಚ್ಚದ ಮೇಲೆ ನಿಗಾ ಇಡಲು ಆದಾಯ ತೆರಿಗೆ ವಿಭಾಗದ ಹಿರಿಯ ಅಧಿಕಾರಿ ಅನಿಲ್ ಕುಮಾರ್ ಅವರನ್ನು ನೇಮಿಸಿದ್ದು ಅವರು ಈಗಾಗಲೇ ಎಲ್ಲಾ ರಾಜಕೀಯ ಪಕ್ಷದವರನ್ನು ಹಾಗೂ ಅಭ್ಯರ್ಥಿಗಳನ್ನು ಕರೆದು ಸಭೆ ನಡೆಸಿದ್ದು ಅವರಿಗೆ ಸೂಕ್ತ ಸಲಹೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ 1,09,099 ಪುರುಷ ಮತದಾರರಿದ್ದು, 1,07,583 ಮಹಿಳಾ ಮತದಾರರು ಹಾಗೂ 29 ಇತರೆ ಮತದಾರರಿದ್ದಾರೆ. 18 ಜನ ಸೇವಾ ಮತದಾರರಿದ್ದು ಅವರಿಗೆ ಅಂಚೆ ಮೂಲಕ ಮತಪತ್ರಗಳನ್ನು ಕಳುಹಿಸಲಾಗಿದೆ. ಅವರು ಮತ ಎಣಿಕೆ ನಡೆಯುವ ದಿನ ಡಿಸೆಂಬರ್ 9 ರ ಬೆಳಿಗ್ಗೆ 9ರೊಳಗೆ ನಮಗೆ ತಲುಪುವಂತೆ ಮತಪತ್ರಗಳಲ್ಲಿ ತಮ್ಮ ಬೆಂಬಲಿತ ಅಭ್ಯರ್ಥಿಯ ಹೆಸರಿಗೆ ಮತದಾನ ಮಾಡಿ ಕಳುಹಿಸಿದರೆ ಅದನ್ನು ಮತ ಎಣಿಕೆಗೆ ಪರಿಗಣಿಸಲಾಗುತ್ತದೆ ಎಂದರು.

750ಕ್ಕೂ ಹೆಚ್ಚು ಅಧಿಕಾರಿಗಳನ್ನು ವಿವಿಧ ತಾಲ್ಲೂಕುಗಳಿಂದ ಕರ್ತವ್ಯಕ್ಕೆ ನಿಯೋಜಿಸಿದ್ದು ಅವರಿಗೆ ನವೆಂಬರ್ 23 ರಂದು ಮೊದಲನೆಯ ಹಂತದ ತರಬೇತಿ ಆಯೋಜಿಸಲಾಗಿದೆ ಎಂದರು.

ಪೊಲೀಸ್ ಇಲಾಖೆಯೂ ನ್ಯಾಯಯುತವಾದ ಹಾಗು ಮುಕ್ತ ಮತದಾನ ನಡೆಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ತಿಳಿಸಿದರು. ತಹಶೀಲ್ದಾರ್ ಗೀತಾ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT