ದೊಡ್ಡಬಳ್ಳಾಪುರ: ಬೆಂಗಳೂರಿನ ರಾಜಭವನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಡಿವೈಎಸ್ಪಿ ಟಿ.ರಂಗಪ್ಪ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಷ್ಟ್ರಪತಿ ಪದಕ ಪ್ರದಾನ ಮಾಡಿದರು.

ರೌಡಿಶೀಟರ್ಗಳನ್ನು ಮಟ್ಟುಹಾಕಿದ್ದು, ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದವರನ್ನು ಪತ್ತೆ ಮಾಡಿದ್ದು, ಗೌರಿಲಂಕೇಶ್ ಹತ್ಯೆ ಪ್ರಕರಣದಲ್ಲಿನ ತನಿಖೆ ಹಾಗೂ ಆರೋಪಿಗಳನ್ನು ಬಂಧಿಸುವಲ್ಲಿನ ಸಾಧನೆಗಾಗಿ ಡಿವೈಎಸ್ಪಿ ಟಿ.ರಂಗಪ್ಪ ಅವರಿಗೆ 2018ನೇ ಸಾಲಿನ ರಾಷ್ಟ್ರಪತಿ ಶ್ಲಾಘನೀಯ ಪದಕ (ಒಟ್ಟಾರೆ ಸೇವೆಗೆ) ನೀಡಿ ಗೌರವಿಸಲಾಗಿದೆ.

ಎರಡು ವರ್ಷಗಳಿಂದ ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಟಿ.ರಂಗಪ್ಪ ಅವರು ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದಾಗ ಗೌರಿಲಂಕೇಶ್ ಹತ್ಯೆ ಸಂದರ್ಭದಲ್ಲಿ ರಚಿಸಲಾಗಿದ್ದ ಎಸ್ಐಟಿ ತಂಡದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಇಡೀ ದೇಶದ ಗಮನ ಸೆಳೆದಿದ್ದ ಸಂಶೋಧಕ ಎಂ.ಎಂ.ಕಲರ್ಬುಗಿ ಹಾಗೂ ಮಹಾರಾಷ್ಟ್ರದ ವಿಚಾರವಾದಿ ದಾಬೋಲ್ಕರ್ತಾಪ್ಸೆ ಅವರ ಹತ್ಯೆ ತನಿಖೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ಸಿಯಾಗಿದ್ದರು.

ಶಿವಮೊಗ್ಗ, ಬೆಂಗಳೂರು ನಗರದಲ್ಲಿ ಡಿವೈಎಸ್ಪಿ ಆಗಿ ಸೇವೆ ಸಲ್ಲಿರುವ ಟಿ.ರಂಗಪ್ಪ ಅವರು ನಕ್ಸಲ್ ನಾಯಕ ಸಾಕೇತ್ರಾಜ್, ಬಿಜೆಪಿ ಮುಖಂಡ ರುದ್ರೇಶ್ ಹತ್ಯೆ, ಬೆಂಗಳೂರಿನ ಕಾರ್ಪೋರೇಷನ್ ಸಮೀಪದ ಎಟಿಎಂನಲ್ಲಿ ಬ್ಯಾಂಕ್ ಉದ್ಯೋಗಿ ಮೇಲೆ ನಡೆದ ಹಲ್ಲೆ ಸೇರಿದಂತೆ ಹಲವಾರು ಪ್ರಕರಣಗಳ ತನಿಖೆಯಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

ಟಿ.ರಂಗಪ್ಪ ಅವರ ಸಾಧನೆಯನ್ನು ಗುರುತಿಸಿ ಗೃಹಮಂತ್ರಿ ತನಿಖಾ ಪದಕ, 2010ನೇ ಸಾಲಿನಲ್ಲಿ ಮುಖ್ಯಮಂತ್ರಿ ಪದಕ, 2012ನೇ ಸಾಲಿನಲ್ಲಿ ರಾಷ್ಟ್ರಪತಿ ಶೌರ್ಯ ಪದಕ (ಗ್ಯಾಲೆಂಟರಿ ಮೆಡಲ್), 2019ರಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ಎಸ್.ರಾಜು ಅವರು ಪ್ರಶಸ್ತಿ ಫಲಕ ಹಾಗೂ ₹50,000 ನಗದು ಪುರಸ್ಕಾರ ನೀಡಿ ಗೌರವಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.