ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಸಹಕರಿಸಿ

ವಿಜಯಪುರ: ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನ
Last Updated 12 ಸೆಪ್ಟೆಂಬರ್ 2020, 0:51 IST
ಅಕ್ಷರ ಗಾತ್ರ

ವಿಜಯಪುರ: ‘ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನದ ಅಂಗವಾಗಿ ಶಾಲಾ, ಕಾಲೇಜುಗಳ ಮಕ್ಕಳಿಗೆ ಜಂತುಹುಳು ನಿರ್ಮೂಲನಾ ಮಾತ್ರೆ ನೀಡಿ, ಜಂತು ಹುಳ ಸಮಸ್ಯೆ ನಿವಾರಣೆಗೆ ಶ್ರಮಿಸಲಾಗುತ್ತಿದೆ. ಪೋಷಕರು ಸರ್ಕಾರದ ಕಾರ್ಯಕ್ರಮಕ್ಕೆ ಸಹಕರಿಸಬೇಕು’ ಎಂದು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಮಮತಾ ಹೇಳಿದರು.

ಇಲ್ಲಿನ ರಾಯಲ್ ಪಬ್ಲಿಕ್ ಶಾಲೆಯ ಆವರಣದಲ್ಲಿ ರಾಷ್ಟ್ರೀಯ ಜಂತು ಹುಳು ನಿರ್ಮೂಲನಾ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ಜಂತುಹುಳ ನಿವಾರಣಾ ಮಾತ್ರೆಗಳನ್ನು ನೀಡಿ ಅವರು ಮಾತನಾಡಿದರು.

ಮಕ್ಕಳಿಗೆ ಆಲ್ ಬೆಂಡಾಜೋಲ್ ಜಂತು ಹುಳು ನಿವಾರಣಾ ಮಾತ್ರೆ ನೀಡಿ, ‘ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತ ಹೀನತೆ ತೊಡೆದು ಹಾಕಬಹುದು. ಇಡೀ ದೇಶದಲ್ಲಿ ಅಪೌಷ್ಟಿಕತೆ ಸಮಸ್ಯೆಯು ಹೆಚ್ಚಾಗಿದ್ದು, ಅದನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಜಂತು ಹುಳು ನಿರ್ಮೂಲನ ದಿನದ ಆಚರಣೆ ಸಹಕಾರಿ. ಜಂತು ಹುಳು ನಿರ್ಮೂಲನೆಯಿಂದಾಗಿ ಮಕ್ಕಳು ಸೇವನೆ ಮಾಡುವ ಪೌಷ್ಟಿಕ ಆಹಾರ ಮಕ್ಕಳ ದೇಹಕ್ಕೆ ಸರಿಯಾದ ಪ್ರಮಾಣದಲ್ಲಿ ಲಭ್ಯವಾಗುತ್ತದೆ. ಜಂತು ಹುಳು ನಿರ್ಮೂಲನೆಗೆ ಮಾತ್ರೆ ಸೇವಿಸುವುದು ಮಾತ್ರವಲ್ಲದೇ ಶೌಚಾಲಯಕ್ಕೆ ಹೋಗಿ ಬಂದ ನಂತರ ಹಾಗೂ ಊಟಕ್ಕೆ ಮುನ್ನ ಚೆನ್ನಾಗಿ ಕೈ ತೊಳೆಯುವ ಹವ್ಯಾಸವನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು’ ಎಂದರು.

ಶಾಲೆಯ ಸಂಸ್ಥಾಪಕ ವಿ.ಎನ್.ರಮೇಶ್,ಮುಖ್ಯಶಿಕ್ಷಕಿ ಚಂದ್ರಮುಖಿ ರಮೇಶ್ ಮಾತನಾಡಿದರು. ಆರೋಗ್ಯ ಇಲಾಖೆಯ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT