ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಅಭಿವೃದ್ಧಿಗೆ ಆದ್ಯತೆ: ಬಿಇಒ

Last Updated 1 ಜುಲೈ 2022, 2:32 IST
ಅಕ್ಷರ ಗಾತ್ರ

ಆನೇಕಲ್:ಆನೇಕಲ್‌ನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಜೆ.ಎಂ. ಜಯಲಕ್ಷ್ಮಿ ಅವರಿಗೆ ಸ್ವಾಗತ ಮತ್ತು ವರ್ಗಾವಣೆಗೊಂಡ ಬಿಇಒ ಪಿ. ನರಸಿಂಹರಾಜು ಅವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ಗುರುವಾರ ಪಟ್ಟಣದ ಗುರು ಭವನದಲ್ಲಿ ನಡೆಯಿತು.

ನೂತನ ಕ್ಷೇತ್ರ ಶಿಕ್ಷಣಾಧಿಕಾರಿ ಜಯಲಕ್ಷ್ಮಿ ಮಾತನಾಡಿ, ‘ತಾಲ್ಲೂಕಿನ ಶೈಕ್ಷಣಿಕ ಅಭಿವೃದ್ಧಿಯೇ ನನ್ನ ಗುರಿಯಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚಿನ ಫಲಿತಾಂಶ ತರುವುದು ಮತ್ತು ಸರ್ಕಾರಿ ಶಾಲೆಗಳ ವಾತಾವರಣವನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಪಡೆದು ಸರ್ಕಾರಿ ಶಾಲೆಗಳ ಸಬಲೀಕರಣ ಮಾಡುವ ದಿಸೆಯಲ್ಲಿ ಕೆಲಸ ಮಾಡಲಾಗುವುದು’ ಎಂದು ತಿಳಿಸಿದರು.

ಶಿಕ್ಷಕರ ವೇತನ, ಭತ್ಯೆಗಳು ನಿಗದಿತ ಅವಧಿಯಲ್ಲಿ ದೊರೆಯುವಂತೆ ಮಾಡಲಾಗುವುದು. ಆದರೆ, ಶಿಕ್ಷಕರು ಶಾಲೆಗಳ ಅಭಿವೃದ್ಧಿಗೆ ಕೆಲಸ ಮಾಡಬೇಕು. ಶಾಲಾ ಅವಧಿಯಲ್ಲಿ ಯಾವುದೇ ವಿನಾಯಿತಿ ನೀಡುವುದಿಲ್ಲ. ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರ ಸಂಘಗಳು, ಪೋಷಕರು, ಜನಪ್ರತಿನಿಧಿಗಳು ಬೆಂಬಲ ನೀಡಬೇಕು ಎಂದು ಕೋರಿದರು.

ಬೆಂಗಳೂರು ಉತ್ತರ ಜಿಲ್ಲಾ ಉಪ ಸಮನ್ವಯಾಧಿಕಾರಿಯಾಗಿ ವರ್ಗಾವಣೆಗೊಂಡ ಪಿ. ನರಸಿಂಹರಾಜು ಮಾತನಾಡಿದರು. ಕಾರ್ಯಕ್ರಮದಲ್ಲಿ ಆನೇಕಲ್‌ ದೈಹಿಕ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನೇತ್ರಾವತಿ ಅವರನ್ನು ಸ್ವಾಗತಿಸಲಾಯಿತು.

ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ. ಶಿವಣ್ಣ, ಕಾರ್ಯದರ್ಶಿ ಮಂಜುನಾಥ್, ಖಜಾಂಚಿ ಜಿ. ನಾಗರಾಜು, ಸಂಘಟನಾ ಕಾರ್ಯದರ್ಶಿ ಸುರೇಶ್‌, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಆನಂದ್‌ಕುಮಾರ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ರಾಜಶೇಖರ್‌, ಗಣೇಶ್‌, ಭಾರತಿ, ಖಾಸಗಿ ಶಾಲೆಗಳ ಸಂಘದ ಅಧ್ಯಕ್ಷ ರವಿಕುಮಾರ್‌, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಎಂ. ಗೋಪಾಲ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌ನ ಕಾರ್ಯದರ್ಶಿ ಎ.ಎನ್‌. ನರೇಂದ್ರಕುಮಾರ್, ನಿವೃತ್ತ ಮುಖ್ಯೋಪಾಧ್ಯಾಯ ಆರ್. ಮುನಿಯಲ್ಲಪ್ಪ, ಶಿಕ್ಷಣ ಸಂಯೋಜಕ ರಾದ ದತ್ತಗುರು ಹೆಗಡೆ, ನವೀನ್‌, ಸಾಧಿಕ್‌, ಸುರೇಶ್‌, ಬಿಇಒ ಕಚೇರಿಯ ಅಧೀಕ್ಷಕಿ ಸುಧಾಮಣಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT