ಸೋಮವಾರ, ಜುಲೈ 26, 2021
26 °C
soolibele

ತಾಲ್ಲೂಕಿನ ಅಭಿವೃದ್ಧಿಗೆ ಆದ್ಯತೆ: ಶಾಸಕ ಶರತ್ ಬಚ್ಚೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸೂಲಿಬೆಲೆ: ಸಾರ್ವಜನಿಕರ ಅನುದಾನದಲ್ಲಿ ನಿರ್ಮಾಣವಾಗುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿರುವಂತೆ ಗುತ್ತಿಗೆದಾರರು ನೋಡಿಕೊಳ್ಳಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಸೂಲಿಬೆಲೆ ಹೋಬಳಿಯ ಕಂಬಳೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇ.ಮುತ್ಸಂದ್ರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಮುತ್ಸಂದ್ರ ಗ್ರಾಮದಲ್ಲಿ ₹ 10 ಲಕ್ಷ ಅಂದಾಜು ವೆಚ್ಚದಲ್ಲಿ ಕಟ್ಟಡ ಹಾಗೂ ಕಾಲೊನಿಯಲ್ಲಿ ₹ 10 ಲಕ್ಷ ಅಂದಾಜು ವೆಚ್ಚದಲ್ಲಿ ಚರಂಡಿ ಕಾಮಗಾರಿಯನ್ನು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ಕೈಗೊಲ್ಲಲಾಗಿದೆ ಎಂದು ತಿಳಿಸಿದರು. 

ಹೊಸಕೋಟೆ ತಾಲ್ಲೂಕನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ಮೊದಲ ಆದ್ಯತೆಯಾಗಿದೆ. ಆ ದೆಸೆಯಲ್ಲಿ ಯೋಜನೆಗಳನ್ನು ಮಾಡಲಾಗುತ್ತಿದೆ. ಕೊರೊನಾ ಸಂಕಷ್ಟದಲ್ಲಿ ಜನತೆ ಜೊತೆಗಿದ್ದೇನೆ. ಈ ಸಂದರ್ಭದಲ್ಲಿ ಸುಮಾರು 45 ಸಾವಿರ ಆಹಾರ ಕಿಟ್ ನೀಡಲಾಗಿದೆ. ಇತ್ತೀಚೆಗೆ ಮಳೆ ಹಾನಿಗೊಳಗಾದ ಕುಟುಂಬಗಳ ನೆರವಿಗೆ ಧಾವಿಸಲಾಗಿದೆ ಎಂದು ಹೇಳಿದರು.  

ಸಹಕಾರ ಬ್ಯಾಂಕ್ ಅಧ್ಯಕ್ಷ ಬಿ.ವಿ.ಸತೀಶಗೌಡ, ವೈ.ಎಸ್.ಎಂ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಸದಸ್ಯ ನಾಗರಾಜಪ್ಪ, ಹಸಿಗಾಳ ಸೋಮಶೇಖರ್, ಮುಖಂಡರಾದ ಆನಂದಪ್ಪ, ದೇವರಾಜ್ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.