ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Last Updated 23 ಏಪ್ರಿಲ್ 2021, 4:42 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಕೋವಿಡ್-19 ಎರಡನೇ ಅಲೆ ವ್ಯಾಪಕವಾಗಿ ಹರಡುವುದನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ತಡೆಗಟ್ಟುವ ಹಲವು ಅನುಸರಣಾ ಕ್ರಮಗಳನ್ನು ರಾಜ್ಯ ಸರ್ಕಾರ ಆದೇಶಿಸಿದ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಸಿ.ಆರ್.ಪಿ.ಸಿ. 1973ರ ಕಲಂ 144ರ‌ಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ನಿಷೇಧಾಜ್ಞೆ ಜಾರಿ ಮಾಡಿ ಆದೇಶಿಸಿದ್ದಾರೆ.

ಕೊರೊನಾ ಸೋಂಕು ಹರಡದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಲ್ಲಿ ಸಂತೆ, ಜಾತ್ರೆ, ಮೆರವಣಿಗೆ, ಸಮಾವೇಶ, ಸಮ್ಮೇಳನ, ಕ್ರೀಡಾಕೂಟ, ಸಮಾರಂಭಗಳು ಹಾಗೂ ಇತರೆ ಯಾವುದೇ ಧಾರ್ಮಿಕ ಸಮಾರಂಭಗಳನ್ನು ಪ್ರತಿಬಂಧಿಸಿ ಅಂತರವನ್ನು ಕಾಯ್ದುಕೊಳ್ಳುವುದನ್ನು ಕಡ್ಡಾಯಗೊಳಿಸಿ, ಜಿಲ್ಲೆಯಾದ್ಯಂತ ತುರ್ತು ಸೇವೆಗಳನ್ನು ಹೊರತುಪಡಿಸಿ ಮೇ 4ರ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯ ಸರ್ಕಾರದ ಆದೇಶದಲ್ಲಿ ಸೂಚಿಸಿರುವ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಸೆಕ್ಷನ್ 32 ವಿಪತ್ತು ನಿರ್ವಹಣಾ ಕಾಯ್ದೆ 2005, ವಿಪತ್ತು ನಿರ್ವಹಣಾ ಕಾಯ್ದೆ 2005 ಸೆಕ್ಷನ್ 51 ರಿಂದ 60 ಹಾಗೂ ಐ.ಪಿ.ಸಿ ಸೆಕ್ಷನ್ 188 ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ‌ ಕಾಯ್ದೆ 2020ರಡಿ ಶಿಸ್ತು ಕ್ರಮವನ್ನು ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT