ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ಗ್ರಾಮಾಂತರ | ನಾಳೆಯಿಂದ ನಿಷೇಧಾಜ್ಞೆ ಜಾರಿ: ಡಿ.ಸಿ

16ಕ್ಕೆ ಪರಿಷತ್‌ ಉಪಚುನಾವಣೆ: ಜಿಲ್ಲಾಡಳಿತ ಸಜ್ಜು
Published 13 ಫೆಬ್ರುವರಿ 2024, 15:07 IST
Last Updated 13 ಫೆಬ್ರುವರಿ 2024, 15:07 IST
ಅಕ್ಷರ ಗಾತ್ರ

ದೇವನಹಳ್ಳಿ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆಯ ಮತದನ ಫೆ.16 ರಂದು ನಡೆಯಲಿದ್ದು, ಫೆ.14ರ ಸಂಜೆ 4 ಗಂಟೆಯಿಂದ 16ರ ಮಧ್ಯರಾತ್ರಿ12 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆರು ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಲಿದೆ ಎಂದು ಎನ್. ಶಿವಶಂಕರ ಹೇಳಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿನ ಉಪಚುನಾವಣೆ 2024 ರ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಜೊತೆಗಿನ ಅಂತಿಮ ಸುತ್ತಿನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮತದಾನ ನಡೆಯುವ ಆರು ಮತದಾನ ಕೇಂದ್ರಗಳ ಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಸಮಯದಲ್ಲಿ ಆಮಿಷಗಳಿಗೆ ಮತದಾರರನ್ನು ಒಳಪಡಿಸುವುದು, ಬೆದರಿಸಲು ಯತ್ನಿಸುವುದು ತಮ್ಮ ಪರವಾಗಿ ಪ್ರಚಾರ ಮಾಡುವುದು, ಮತಗಟ್ಟೆಗಳ ಹತ್ತಿರದಲ್ಲಿ ಪ್ರಚಾರ ಮಾಡುವುದು ಸಾರ್ವಜನಿಕ ಸಭೆ ನಡೆಸುವುದು ಮತದಾರರನ್ನು ವಿವಿಧ ಸಾರಿಗೆ ವ್ಯವಸ್ಥೆಗಳ ಮೂಲಕ ಮತಗಟ್ಟೆಗಳಿಗೆ ಕರೆದುಕೊಂಡು ಬರುವುದು, ಶಾಂತಿಭಂಗ ಉಂಟು ಮಾಡುವುದು, ಅಹಿತಕರ ಘಟನೆ ತಪ್ಪಿಸಲು ಅಗತ್ಯ ಕ್ರಮವಹಿಸಲಾಗಿದೆ.

ಇಂತಹ ಸಂಭವನೀಯ ಘಟನೆ ತಡೆಯಲು ಹಾಗೂ ಮತದಾನದ ಪವಿತ್ರತೆ ಕಾಪಾಡಲು ಜಿಲ್ಲೆಯ ನಾಲ್ಕು ತಾಲ್ಲೂಕು ವ್ಯಾಪ್ತಿಯ ಆರು ಮತದಾನ ಕೇಂದ್ರಗಳಲ್ಲಿ ನಿಷೇಧಾಜ್ಞೆ ವಿಧಿಸಲಾಗಿದ್ದು, ಬಹಿರಂಗ ಪ್ರಚಾರ ಕೊನೆಗೊಳ್ಳಲಿದೆ ಎಂದು ಹೇಳಿದರು.

ಮತದಾನ ನಡೆಯುವ ಸಂದರ್ಭದಲ್ಲಿ ಮತಗಟ್ಟೆ ಸ್ಥಳದಿಂದ 100 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪೋಲಿಂಗ್ ಏಜೆಂಟ್ಸ್ ಮತದಾನ ದಿನದಂದು ತಪ್ಪದೆ ಬೆಳಗ್ಗೆ 7 ಗಂಟೆಗೆ ಹಾಜರಿರಬೇಕು. ಮತದಾರರಿಗೆ ಈಗಾಗಲೇ ಗುರುತಿನ ಚೀಟಿ ವಿತರಿಸಲು ಕ್ರಮ ವಹಿಸಲಾಗುತ್ತಿದೆ. ಮತದಾರರು ಯಾವುದೇ ಪೆನ್, ಎಲೆಕ್ಟ್ರಾನಿಕ್ ಉಪಕರಣಗಳನ್ನು ಮತದಾನದ ಸಮಯದಲ್ಲಿ ತರಬಾರದು.

ಮತದಾನ ಸಮಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಕೈಗೊಂಡು ಮತದಾನ ಸುಸೂತ್ರವಾಗಿ ನಡೆಸಲು ಸನ್ನದ್ಧರಾಗಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅಮರೇಶ್ ಎಚ್, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT