ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾವಯವ ಕೃಷಿ, ನೈಸರ್ಗಿಕ ಕೃಷಿಗೆ ಪ್ರೋತ್ಸಾಹ

Last Updated 8 ಸೆಪ್ಟೆಂಬರ್ 2019, 19:30 IST
ಅಕ್ಷರ ಗಾತ್ರ

ದೇವನಹಳ್ಳಿ: ಕೃಷಿ ಇಲಾಖೆ ವತಿಯಿಂದ 2019–20 ನೇ ಸಾಲಿನ ಸಾವಯವ ಕೃಷಿ ಮತ್ತು ಶೂನ್ಯ ಬಂಡವಾಳ ನೈಸರ್ಗಿಕ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರ್ಯಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಸಾವಯವ ರೈತರು, ನವೋದ್ಯಮಿಗಳು,ರೈತ ಸಂಘಗಳು, ನೊಂದಾಯಿತ ಸ್ವ-ಸಹಾಯ ಗುಂಪುಗಳು, ರೈತ ಉತ್ಪಾದಕರ ಸಂಸ್ಥೆಗಳು, ಖಾಸಗಿ ಉದ್ದಿಮೆದಾರರು ಮತ್ತು ಸಾರ್ವಜನಿಕ ವಲಯ ಘಟಕಗಳು, ಜಂಟಿ ವಲಯ ಘಟಕಗಳು ಮತ್ತು ಆಹಾರ ಘಟಕಗಳ ಸ್ಥಾಪನೆ, ವಿಸ್ತರಣೆ ಅಥವಾ ಆಧುನೀಕರಣಕ್ಕೆ ಸಂಬಂಧಿಸಿದ ಸಾವಯುವ ಉದ್ದಿಮೆಯಲ್ಲಿ ಕಾರ್ಯನಿರತರು ಪ್ರೋತ್ಸಾಹಧನ ಪಡೆಯಬಹುದು. ಈ ಸಂಬಂಧ ಸಾವಯುವ ಪ್ರಮಾಣದ ದಾಖಲಾತಿ ಹೊಂದಿರುವುದು ಅವಶ್ಯಕವಾಗಿದೆ.

ಸಾವಯವ ಮತ್ತು ನೈಸರ್ಗಿಕ ಕೃಷಿ ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ, ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರ್ಯಾಂಡಿಂಗ್ ಘಟಕಗಳಿಗೆ ಪ್ರಸ್ತಾವನೆಯ ಒಟ್ಟು ವೆಚ್ಚದ ಮೇಲೆ ಶೇ 50ಸಹಾಯಧನ ಪ್ರತಿ ಘಟಕಕ್ಕೆ ಗರಿಷ್ಠ ₹10 ಲಕ್ಷ ನೀಡಲಾಗುವುದು.

ಪ್ರಸ್ತಾವನೆಯ ಒಟ್ಟು ಮೊತ್ತವು ₹ 5 ಲಕ್ಷಗಳಿಗಿಂತ ಕಡಿಮೆ ಇರುವ ಅರ್ಜಿದಾರರಿಗೆ ಘಟಕ ಸ್ಥಾಪನೆ, ಉನ್ನತೀಕರಣ, ಆಧುನೀಕರಣ ಉದ್ದೇಶಕ್ಕಾಗಿ ಸಹಾಯಧನವನ್ನು ಎರಡು ಕಂತುಗಳಲ್ಲಿ ಅರ್ಜಿದಾರರ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುವುದು. ಪ್ರಸ್ತಾವನೆಯ ಒಟ್ಟು ಮೊತ್ತವು ₹ 5 ಲಕ್ಷಗಳಿಗಿಂತ ಹೆಚ್ಚಾಗಿದ್ದಲ್ಲಿ ಘಟಕ ಸ್ಥಾಪನೆಗೆ ಮಂಜೂರಾಗುವ ನೆರವನ್ನು ಬ್ಯಾಂಕ್ ಸಾಲ ಆಧಾರಿತ ಸಹಾಯಧನವಾಗಿ ಸಂಬಂಧಿಸಿದ ರಾಷ್ಟ್ರೀಕೃತ ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಮುಖಾಂತರ ಎರಡು ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು.

ಪ್ರಸ್ತಾವನೆ ಆಧಾರಿತ ಕಾರ್ಯಕ್ರಮವಾಗಿದ್ದು, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಮೂಲಕ ಅನುಷ್ಠಾನ, ಮೊದಲು ಸಲ್ಲಿಕೆಯಾಗುವ ಅರ್ಹ ಪ್ರಸ್ತಾವನೆಗಳಿಗೆ ಆದ್ಯತೆ ನೀಡಲಾಗುವುದು. ಮಾಹಿತಿಗಾಗಿ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳು ಮತ್ತು ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಿ ಅಥವಾ ರೈತ ಸಹಾಯವಾಣಿ- 18004253553 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT