ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

 ತೃತೀಯ ಲಿಂಗಿಗಳಿಗೂ ರಕ್ಷಣೆ ಕಲ್ಪಿಸಿ: ಡಿ.ಸಿ

Last Updated 23 ಡಿಸೆಂಬರ್ 2019, 14:28 IST
ಅಕ್ಷರ ಗಾತ್ರ

ದೇವನಹಳ್ಳಿ: ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ವೈದ್ಯಕೀಯ, ಪೊಲೀಸ್, ಸಮಾಲೋಚನೆ ಸೇವೆ ಕಲ್ಪಿಸಬೇಕಾಗಿದೆ. ಸಖಿ ಯೋಜನೆಯಡಿ ತೃತೀಯ ಲಿಂಗಿಗಳಿಗೂ ರಕ್ಷಣೆ ಕಲ್ಪಿಸುವುದು ಅಧಿಕಾರಿಗಳ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ‘ಸಖಿ- ಒನ್ ಸ್ಟಾಪ್ ಸೆಂಟರ್‌’ ಜಿಲ್ಲಾ ಮಟ್ಟದ ಟಾಸ್ಕ್‌ಫೋರ್ಸ್ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೇಂದ್ರ ಸರ್ಕಾರದ ಅನುದಾನಿತ ಸಖಿ -ಓ.ಎಸ್ ಸಿ ಯೋಜನೆ ಪ್ರಮುಖ ಉದ್ದೇಶ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಯರಿಗೆ ಒಂದೇ ಸೂರಿನಡಿ ಎಲ್ಲ ರೀತಿಯ ತುರ್ತುಚಿಕಿತ್ಸೆ ಮತ್ತು ಮನೋಸ್ಥೈರ್ಯ ತುಂಬುವುದು ಇದರ ಪ್ರಮುಖ ಉದ್ದೇಶ ಎಂದರು.

ಸಖಿ ಕೇಂದ್ರಕ್ಕೆ ಅಗತ್ಯವಿರುವ ಸಮಾಲೋಚಕರ ಒಂದು ಹುದ್ದೆ ಹಾಗೂ ಸಮಾಜ ಸೇವಾ ಕಾರ್ಯಕರ್ತ- ಮೂರು ಹುದ್ದೆಗೆ ನಿಯಮಾನುಸಾರ ಭರ್ತಿ ಮಾಡಲಾಗುವುದು ಎಂದರು.

ಸಭೆಯಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಡಿ.ವೈ.ಎಸ್.ಪಿ ಟಿ.ರಂಗಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಪುಷ್ಕ ಜಿ.ರಾಯ್ಕರ್, ಸ್ವಯಂಸೇವಾ ಸಂಸ್ಥೆಗಳ ಸದಸ್ಯರು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT