ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯವಿವಾಹಕ್ಕೆ ತಡೆ: ಬಾಲಕಿ ರಕ್ಷಣೆ

Last Updated 17 ಸೆಪ್ಟೆಂಬರ್ 2021, 4:29 IST
ಅಕ್ಷರ ಗಾತ್ರ

ವಿಜಯಪುರ:ಬಾಲ್ಯವಿವಾಹ ನಡೆಸಲು ಪೂರ್ವ ತಯಾರಿ ಮಾಡಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳ ತಂಡ, ಪೋಷಕರಿಗೆ ಎಚ್ಚರಿಕೆ ನೀಡಿ ಬಾಲಕಿಯನ್ನು ರಕ್ಷಿಸಿದೆ.

ಪಟ್ಟಣದ ಈದ್ಗಾ ಮೊಹಲ್ಲಾದಲ್ಲಿ 15 ವರ್ಷದ ಬಾಲಕಿಗೆ ವಿವಾಹ ಮಾಡಲು ತಯಾರಿ ಮಾಡಿಕೊಂಡಿರುವುದನ್ನು ಖಚಿತಪಡಿಸಿಕೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಚೈಲ್ಡ್‌ಲೈನ್ ತಂಡದ ಅಧಿಕಾರಿಗಳು ದಾಳಿ ನಡೆಸಿದರು. ಆಗ ಮದುವೆ ನಿಲ್ಲಿಸಲು ಪೋಷಕರು ವಿರೋಧ ವ್ಯಕ್ತಪಡಿಸಿದರು.

ಈ ವೇಳೆ ಪೊಲೀಸರ ಸಹಾಯದಿಂದ ಮದುವೆ ನಿಲ್ಲಿಸುವಲ್ಲಿ ಯಶಸ್ವಿಯಾಗಿರುವ ಅಧಿಕಾರಿಗಳ ತಂಡ ಪೋಷಕರಿಗೆ ಎಚ್ಚರಿಕೆ ನೀಡಿತು. ಪೋಷಕರಿಂದ ಮುಚ್ಚಳಿಕೆ ಬರೆಯಿಸಿಕೊಂಡು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮುಂದೆ ಹಾಜರಾಗುವಂತೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT